Tuesday, February 3, 2026
Tuesday, February 3, 2026

M Visvesvaraya Celebrating Engineers Day ಭದ್ರಾವತಿ ವಿಐಎಸ್ಪಿ ಯಲ್ಲಿ “ಸರ್ ಎಂ.ವಿ.” ದಿನಾಚರಣೆ

Date:

M Visvesvaraya Celebrating Engineers Day ಅತ್ಯುತ್ತಮ ಇಂಜಿನೀಯರ್, ರಾಜನೀತಿಙ್ಞ, ದಾರ್ಶನಿಕ, ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನವನ್ನು ಇಂಜಿನೀರ‍್ಸ್ ದಿನಾಚರಣೆಯನ್ನಾಗಿ ಆಚರಿಸಿ, ದಿನಾಂಕ ೧೫-೦೯-೨೦೨೪ ರಂದು ವಿಐಎಸ್‌ಪಿಯ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು. ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಶ್ರೀ ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಇವರುಗಳು ವಿಐಎಸ್‌ಪಿ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾನ್ ವ್ಯಕ್ತಿತ್ವಕ್ಕೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ‘ಸ್ವಚ್ಛಭಾರತ ಅಭಿಯಾನ-೨೦೨೪ರ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...