Friday, March 20, 2026
Friday, March 20, 2026

Girish Kasaravalli Book ಪ್ರಸ್ತುತ ಸಿನಿಮಾವು ಮಾರುಕಟ್ಟೆ ಸಂಸ್ಕೃತಿಯಲ್ಲಿ ಕಳೆದುಹೋಗಿದೆ- ಗಿರೀಶ್ ಕಾಸರವಳ್ಳಿ

Date:

Girish Kasaravalli Book ವಿದ್ಯಾರ್ಥಿಗಳ ಯೋಚನಾ ಲಹರಿ ತಿಳಿದುಕೊಂಡು ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜ, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಪ್ರದರ್ಶನ, ಸಂವಾದ ಹಾಗೂ ಬಿಂಬ ಬಿಂಬನ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ಪೀಳಿಗೆ ಉತ್ತಮ ಚಿಂತನೆಗಳನ್ನು ನೀಡುವ ಅವಶ್ಯಕತೆ ಇದೆ. ಇಲ್ಲವಾದರೆ ಯುವಪೀಳಿಗೆ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮಾತನಾಡಿ, ಸಾಹಿತ್ಯ ಕೃತಿಗಳನ್ನು ಸಿನಿಮಾ ಮಾಡುವ ವೇಳೆಯಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಧ್ವನಿ, ಬೆಳಕು, ಶಬ್ಧ ಎಲ್ಲವೂ ಪೂರಕವಾಗಿರಬೇಕು. ಪ್ರೇಕ್ಷಕನಿಗೆ ಅನುಭವವಾದರೆ ಸಿನಿಮಾ ಸಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ಸಿನಿಮಾ ಮಾಧ್ಯಮವು ಮಾರುಕಟ್ಟೆ ಸಂಸ್ಕೃತಿಯಲ್ಲಿ ಕಳೆದುಹೋಗಿದೆ. ಮಾರುಕಟ್ಟೆ ಸಂಸ್ಕೃತಿಯಲ್ಲಿ ವ್ಯಾಪಾರದ ದೃಷ್ಟಿಕೋನದಲ್ಲಿ ವಿವಿಧ ಸಂಗತಿಗಳನ್ನು ಬಂಡವಾಳ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕಲಾತ್ಮಕ ಸಿನಿಮಾಗಳ ಕುರಿತು ಮಾತನಾಡಿ, ಸಿನಿಮಾ ನಿರ್ಮಿಸುವಲ್ಲಿ ಸಮಸ್ಯೆ ಇರುವುದಿಲ್ಲ. ಆದರೆ ಅದನ್ನು ಜನರಿಗೆ ತಲುಪಿಸುವ ವ್ಯವಸ್ಥೆಯಲ್ಲಿ ಸಮಸ್ಯೆ ಇರುತ್ತದೆ. ಮೌಲ್ಯಾಧರಿತ ಶಿಕ್ಷಣ ಎಲ್ಲರಿಗೂ ದೊರೆತಾಗ ಕಲಾತ್ಮಕ ಚಿತ್ರಗಳ ಬಗ್ಗೆಯೂ ಆಲೋಚನೆ ಬೆಳೆಯುತ್ತದೆ ಎಂದು ತಿಳಿಸಿದರು.
Girish Kasaravalli Book ರಂಗಕರ್ಮಿ ಕೆ.ಜೆ.ಕೃಷ್ಣಮೂರ್ತಿ ಮಾತನಾಡಿ, ಗಿರೀಶ್ ಕಾಸರವಳ್ಳಿ ಅವರು ಶ್ರೇಷ್ಠ ನಿರ್ದೇಶಕರಾಗಿದ್ದು, ಮುಖಾಮುಖಿ ಸಂವಾದ ನಡೆಸುವುದು ವಿಶೇಷ ಸಂಗತಿ. ವಿನಯಪೂರ್ವ ವ್ಯಕ್ತಿತ್ವ ಹೊಂದಿದ್ದಾರೆ. ಎಲ್ಲರ ಅಭಿಪ್ರಾಯಗಳಿಗೂ ವಿಶೇಷ ಮನ್ನಣೆ ನೀಡುತ್ತಾರೆ ಎಂದು ಹೇಳಿದರು.
ಪ್ರಮುಖರಾದ ಎಚ್.ಯು.ವೈದ್ಯನಾಥ್, ಗೋಪಾಲಕೃಷ್ಣ ಪೈ, ಕೆ.ಚಿದಾನಂದ್, ಜಿ.ವಿಜಯಕುಮಾರ್, ಹರೀಶ್ ಕಾರ್ಣಿಕ್, ಹುಚ್ಚರಾಯಪ್ಪ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...