Pragathi Apple Education 12 ವರ್ಷಕ್ಕೂ ಹೆಚ್ಚು ಕಾಲದಿಂದ ಪಿಯು ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗದ ಪ್ರಗತಿ ಆಪಲ್ ಎಜ್ಯುಕೇಷನ್ ವತಿಯಿಂದ ಸೆ.19 ಮತ್ತು 20 ರಂದು ಅಂಬೇಡ್ಕರ್ ಭವನದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮ ಮತ್ತು ವಿವಿಧ ನೂತನ ಸ್ಕಾಲರ್‌ಶಿಪ್ ಯೋಜನೆಗಳಿಗೆ ಚಾಲನೆ ಮತ್ತು ಪ್ರಗತಿ ಸ್ಕಾಲರ್ಶಿಪ್ ಸಹಕಾರ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿ ಆಪಲ್ ಎಜ್ಯುಕೇಷನ್ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯಕುಮಾರ್ ಬಳಿಗಾರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.19ರಂದು ಬೆಳಿಗ್ಗೆ 10 ಗಂಟೆಗೆ ಹೈಸ್ಕೂಲ್ & ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಓದುವ ಖುಷಿ, ಪರೀಕ್ಷಾ ಸಂಭ್ರಮ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಸಿಇಒ ಹೇಮಂತ ಎನ್. ಉದ್ಘಾಟಿಸಲಿದ್ದಾರೆ, ಮುಖ್ಯ ಉಪನ್ಯಾಸಕರಾಗಿ ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಆಗಮಿಸಲಿದ್ದು, ಶಿಕ್ಷಣ ಕ್ಷೇತ್ರದ ಅನೇಕರು ಭಾಗವಹಿಸಲಿದ್ದಾರೆ ಎಂದರು.
Pragathi Apple Education ಡಾ.ಸಿ.ಆರ್.ಚಂದ್ರಶೇಖರ್ ಅವರು ಬರೆದಿರುವ ಓದುವ ಖುಷಿ,ಪರೀಕ್ಷಾ ಸಂಭ್ರಮ ಪುಸ್ತಕದ ೧೧ನೇ ಆವೃತ್ತಿಯನ್ನು ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಾಮಣ ಬಿಡುಗಡೆ ಮಾಡುವರು. ಈ ಪುಸ್ತಕವನ್ನು ಮಕ್ಕಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು. ನಂತರ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೊದಲಗೋಷ್ಠಿ, ಮಧ್ಯಾಹ್ನ 2:30 ರಿಂದ ಪಿಯು ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳಿಗೆ 2ನೇ ಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಪರೀಕ್ಷೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಡಾ.ಸಿ.ಆರ್.ಚಂದ್ರಶೇಖರ್, ಪರೀಕ್ಷೆ ಮತ್ತು ಆಹಾರ ಕುರಿತು ಮಕ್ಕಳ ತಜ್ಞ ಡಾ.ಸಿ.ಜಿ.ರಾಘವೇಂದ್ರ ವೈಲಾಯ ಉಪನ್ಯಾಸ ನೀಡಲಿದ್ದಾರೆ ಎಂದರು.