Monday, February 2, 2026
Monday, February 2, 2026

Gurukula English Medium School ಕ್ರೀಡೆ ಮಾನಸಿಕ ಬುದ್ಧಿಮಟ್ಟವನ್ನ ಹೆಚ್ಚಿಸುವಲ್ಲಿ ಸಹಕಾರಿ- ರಮೇಶ್

Date:

Gurukula English Medium School ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಹಾಗಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಅಭಿಪ್ರಾಯಪಟ್ಟರು.

ಅವರು ನೆಹರೂ ಕ್ರೀಡಾಂಗಣದಲ್ಲಿ ಎರಡು ದಿನ ನಡೆಯಲಿರುವ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಹಾಗೂ ಗುರುಕುಲ ಆಂಗ್ಲ ಮಾಧ್ಯಮ ಶಾಲೆ, ನವಲೆ,ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಪ್ರಾಥಮಿಕ ಶಾಲೆಗಳ ‘ಎ’ ಮತ್ತು ‘ಬಿ’ವಲಯಗಳ ವಲಯ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಶಿವಮೊಗ್ಗ ತಾಲ್ಲೂಕಿನ ವಲಯ ಮಟ್ಟದ ಕ್ರೀಡಾ ಕೂಟದ ಧ್ವಜಾರೋಣ ನೆರವೇರಿಸಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ, ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.

ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುಕುಲ ಶಾಲೆಯ ಕಾರ್ಯದರ್ಶಿ ಶಿವರಾಜ್ ಜಿ. ಟಿ.ಕ್ರೀಡಾಕೂಟಕ್ಕೆ ಚಾಲನೆ ನೀಡಿ,ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ,ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷಎಸ್. ವಿ.ಶಾಸ್ತ್ರಿ ಮಾತನಾಡುತ್ತಾ, ಪ್ರಪಂಚದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ, ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ವಿಷಾದನೀಯ ಎಂದರು.

Gurukula English Medium School ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳು ನೀವು, ಈಗಿನಿಂದಲೇ ಸತತ ಅಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದರು.

ಕಾರ್ಯ ಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ. ಹೆಚ್. ನಿರಂಜನ್ ಮೂರ್ತಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್, ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ ಕಾರ್ಯದರ್ಶಿ ಕೆ.ಜಿ.ಮಠಪತಿ, ಹಿರಿಯ ಶಿಕ್ಷಕ ಪರಮೇಶ್ವರಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...