Wednesday, October 2, 2024
Wednesday, October 2, 2024

Sri Lanka Election ಶ್ರೀಲಂಕಾ ಅಧ್ಯಕ್ಷರಾಗಿ ಅನುರ ಕುಮಾರ ಡಿಸ್ಸನಾಯಕೆ ಆಯ್ಕೆ

Date:

Sri Lanka Election ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಕಣಕ್ಕಿಳಿದಿದ್ದಾರೆ.

ಶ್ರೀಲಂಕಾದ ಚುನಾವಣಾ ಆಯೋಗದ ಪ್ರಕಾರ ಇದುವರೆಗೆ ಎಣಿಕೆಯಾದ ಮತಗಳಲ್ಲಿ ಶೇ. 53 ರಷ್ಟನ್ನು ದಿಸ್ಸನಾಯಕೆ ಪಡೆದುಕೊಂಡಿದ್ದು, ಮುನ್ನಡೆಯಲ್ಲಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ ಶೇ. 22ರಷ್ಟು ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮೂರನೇ ಸ್ಥಾನದಲ್ಲಿದ್ದಾರೆ.
ಚುನಾವಣಾ ಆಯೋಗದ ಪ್ರಕಾರ, ಅರ್ಹ 17 ಮಿಲಿಯನ್ ಜನರಲ್ಲಿ ಸುಮಾರು 75 ಪ್ರತಿಶತದಷ್ಟು ಜನರು ಶನಿವಾರ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

55 ವರ್ಷದ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ಭ್ರಷ್ಟಾಚಾರ ವಿರೋಧಿ ಕಠಿಣ ಕ್ರಮಗಳು ಮತ್ತು ಜನಸ್ನೇಹಿ ನೀತಿಗಳನ್ನು ರೂಪಿಸುವುದಾಗಿ ದಿಸ್ಸನಾಯಕೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದಾರೆ.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.
2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು.

Sri Lanka Election ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ದಂಗೆಯೇಳದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.
ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ, ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಿರುವ ಲಕ್ಷಣ ಕಾಣುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...