Garlic Price Hike ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಈ ನಡುವೆ ಅಸಲಿ ಬೆಳ್ಳುಳ್ಳಿ ಜೊತೆ ಸಿಮೆಂಟ್ ನಿಂದ ತಯಾರಿಸಿದ ಬೆಳ್ಳುಳ್ಳಿ ಮಾರಾಟ ಮಾಡುತ್ತಿದ್ದ ವರದಿಗಳು ದೇಶದ ಹಲವೆಡೆ ಇತ್ತೀಚೆಗೆ ಕೇಳಿಬಂದಿತ್ತು. ಇದೀಗ, ಕೇಂದ್ರ ಸರ್ಕಾರದಿಂದ ನಿಷೇಧಿಸಲ್ಪಟ್ಟರುವ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುವ, ಚೀನಾ ದೇಶದ ಬೆಳ್ಳುಳ್ಳಿ ಮಾರಾಟವಾಗುತ್ತಿರುವ ದೂರುಗಳು ಕೇಳಿಬರಲಾರಂಭಿಸಿವೆ.
ಈ ನಡುವೆ, ಶಿವಮೊಗ್ಗ ನಗರದ ವಿವಿಧೆಡೆಯೂ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ, ಎಗ್ಗಿಲ್ಲದೆ ನಡೆಯುತ್ತಿರುವ ದೂರುಗಳು ಬಂದಿವೆ! ಈ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ಸೆ. 28 ರ ಶನಿವಾರ ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದೆ.
Garlic Price Hike ಶಿವಮೊಗ್ಗದ ಎಪಿಎಂಸಿ ತರಕಾರಿ ಮಾರುಕಟ್ಟೆ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾದ ಏಳೆಂಟು ಅಂಗಡಿಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದೆ. ಶಂಕಿತ ಚೀನಾ ಬೆಳ್ಳುಳ್ಳಿ ವಶಕ್ಕೆ ಪಡೆದುಕೊಂಡಿದೆ.
‘ವಶಕ್ಕೆ ಪಡೆದ ಬೆಳ್ಳುಳ್ಳಿಯ ಸ್ಯಾಂಪಲ್ ಗಳನ್ನು ಬೆಂಗಳೂರಿನ ಪ್ರಯೋಗಾಲಯದ ಪರೀಕ್ಷೆಗೆ ರವಾನಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ, ಚೀನಾ ಬೆಳ್ಳುಳ್ಳಿ ಹೌದೋ? ಅಲ್ಲವೋ? ಎಂಬುವುದರ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿದೆ. ಅಲ್ಲಿಯವರೆಗೂ ಶಂಕಿತ ಬೆಳ್ಳುಳ್ಳಿ ಮಾರಾಟ ಮಾಡದಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡದ ಮೂಲಗಳು ತಿಳಿಸಿವೆ.
Garlic Price Hike ದಿಢೀರ್ ಬೆಳ್ಳುಳ್ಳಿ ಬೆಲೆ ಏರಿಕೆ ನಡುವೆ ಚೀನಾ ಬೆಳ್ಳುಳ್ಳಿ ಮಾರುಕಟ್ಟೆ ಪ್ರವೇಶ. ಅಧಿಕಾರಿಗಳ ದಾಳಿ
Date: