University of Mysore ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
University of Mysore 1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ. ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.
ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡುತ್ತಿದ್ದರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡುತ್ತಿದ್ದರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.
ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.
University of Mysore ಅವಕಾಶ ವಂಚಿತರಿಗೆ ಸಮಾನ ಅವಕಾಶ ಸಿಕ್ಕಾಗ ಮಾತ್ರ ಸಮ ಸಮಾಜ ನಿರ್ಮಾಣ- ಸಿದ್ಧರಾಮಯ್ಯ
Date: