Saturday, December 6, 2025
Saturday, December 6, 2025

Shivamogga Railway ರೈಲ್ವೆ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಇತ್ಯಾದಿ ಸೇವೆ ಆರಂಭಿಸಲು ನಾಗರೀಕ ಸಂಘದ ಮನವಿ

Date:

Shivamogga Railway ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ತಾಣ, ಐತಿಹಾಸಿಕ ತಾಣಗಳ ಮಾಹಿತಿ ಕೇಂದ್ರ ತೆರೆಯುವ ಜತೆಯಲ್ಲಿ ಸಾರ್ವಜನಿಕ ಹೆಲ್ಪ್ ಡೆಸ್ಕ್ ಆರಂಭಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿಂದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗದಿಂದ ಹೊರಡುವ ಮತ್ತು ಬರುವ ಎಲ್ಲ ರೈಲ್ವೆ ಕೋಚ್‌ಗಳಲ್ಲಿ ಶಿವಮೊಗ್ಗ ಜಿಲ್ಲಾ ಐತಿಹಾಸಿಕ ಸ್ಥಳಗಳು ಮತ್ತು ಪ್ರವಾಸಿ ಸ್ಥಳಗಳ ಸ್ತಬ್ಧಚಿತ್ರವನ್ನು ಬೋಗಿಗಳಲ್ಲಿ ಅಳವಡಿಸುವಂತೆ ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರ, ಕೈಗಾರಿಕಾ ಕ್ಷೇತ್ರ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದೆ. ಇನ್ನು ಪ್ರಗತಿ ಸಾಧಿಸಲು ಅಗತ್ಯ ರೈಲ್ವೆ ಸೌಕರ್ಯಗಳನ್ನು ಶಿವಮೊಗ್ಗ ಜಿಲ್ಲೆ ಮತ್ತು ನಗರಕ್ಕೆ ಒದಗಿಸಲು ಕ್ರಮ ವಹಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗ ನಗರದಿಂದ ಅರಸೀಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಮೂಲಕ ಮಂಗಳೂರಿಗೆ ಹೊಸ ರೈಲ್ವೆ ಇಂಟರ್ ಸಿಟಿ ರೈಲು ಬಿಡಬೇಕು. ಇದರಿಂದ ಕೇರಳ, ಕೊಚ್ಚಿನ್, ಗುರುವಾಯುರು, ಶಬರಿಮಲೆ ದೇವಸ್ಥಾನಕ್ಕೆ ಹೋಗಲು ಅನುಕೂಲವಾಗುತ್ತದೆ. ಶಿವಮೊಗ್ಗದಿಂದ ಮಂಗಳೂರು ನಗರಕ್ಕೆ ಸಂಪರ್ಕ ಸಿಗುತ್ತದೆ.

Shivamogga Railway ಶಿವಮೊಗ್ಗ ರೈಲ್ವೆ ಸ್ಟೇಷನ್‌ನಲ್ಲಿ 50 ಬೆಡ್‌ನ ರೈಲ್ವೆ ಯಾತ್ರಿನಿವಾಸ, ಲಗೇಜ್ ಲಾಕರ್ ಮತ್ತು ಸ್ತ್ರೀಯರಿಗೆ ಪ್ರತ್ಯೇಕ ರೆಸ್ಟ್ ರೂಮ್ ವಿತ್ ಸಿ.ಸಿ. ಟಿ.ವಿ ಕ್ಯಾಮೆರಾ ವ್ಯವಸ್ಥೆ ಕಲ್ಪಿಸಬೇಕು. 1, 2 ಮತ್ತು 3ನೇ ಫ್ಲಾಟ್ ಫಾರಂನಲ್ಲಿ ಮಹಿಳೆ ಫೀಡಿನ್ ಕ್ಯಾಬಿನ್ ಅಳವಡಿಸಬೇಕು. 2 ಮತ್ತು 3 ನೇ ಪ್ಲಾಟ್ ಫಾರಂಗೆ ಅನುಗುಣವಾಗಿ ಶೌಚಗೃಹ ಕಟ್ಟಿಸಬೇಕು. ದಿನಕ್ಕೆ 8,000 ಜನರು ರೈಲ್ವೆ ಪ್ರಯಾಣಿಕರು ಶಿವಮೊಗ್ಗದಿಂದ ಬೇರೆ ಬೇರೆ ಸ್ಥಳಗಳಿಗೆ ಪ್ರಯಾಣಿಸುತ್ತಾರೆ. ಅವರಿಗೆ ಅನುಕೂಲವಾಗುವಂತೆ 2 ಮತ್ತು 3ನೇ ಫ್ಲಾಟ್ ಫಾರಂಗೆ ಎಕ್ಸ್ಲೇಟರ್ ಅಳವಡಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗದಿಂದ ಬೆಂಗಳೂರಿಗೆ ಗರೀಬಿ ರಥ ರೈಲು ಆರಂಭಿಸಬೇಕು. ಶಿವಮೊಗ್ಗದಿಂದ ಮುಂಬೈಗೆ ನೇರ ಸಂಪರ್ಕ ರೈಲನ್ನು ಓಡಿಸಬೇಕು. ಶಿವಮೊಗ್ಗ, ಬೀರೂರು ಜಂಕ್ಷನ್, ಹುಬ್ಬಳ್ಳಿ ಮಾರ್ಗವಾಗಿ ಮುಂಬೈಗೆ ರೈಲು ಆರಂಭಿಸಬೇಕು. ಶಿವಮೊಗ್ಗದಿಂದ ಕಡಿಮೆ ದರದಲ್ಲಿ ಪ್ಯಾಸೆಂಜರ್ ರೈಲನ್ನು ದಿನದ ಅವಧಿಯಲ್ಲಿ ಶಿವಮೊಗ್ಗ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ಬಳ್ಳಾರಿ, ಮಂತ್ರಾಲಯ ಮೂಲಕ ರಾಯಚೂರಿಗೆ ಆರಂಭಿಸಬೇಕು.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ವಾಹನದ ನಿಲ್ದಾಣವನ್ನು ಸಮಪರ್ಕವಾಗಿ ಮಾಡಬೇಕು. ರಾತ್ರಿ ವೇಳೆ ಲೈಟ್ ವ್ಯವಸ್ಥೆ ಮಾಡಬೇಕು. ಸೀನಿಯರ್ ಸಿಟಿಜನ್ ಕೋಟಾ ಮತ್ತು ಸೀನಿಯರ್ ಸಿಟಿಜನ್‌ಗೆ ಶೇ. 50 ರಿಯಾಯಿತಿ ದರದ ಟಿಕೇಟ್‌ಅನ್ನು ಮರು ಸ್ಥಾಪಿಸಬೇಕು ಎಂದು ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿAದ ಮನವಿ ಮಾಡಲಾಯಿತು.

ಮನವಿ ಸಲ್ಲಿಸುವ ವೇಳೆ ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದ ಡಾ. ದಿನೇಶ್, ಎನ್.ಗೋಪಿನಾಥ್(ಮಥುರಾ), ಜಿ.ವಿಜಯ್ ಕುಮಾರ್, ಕೆ.ರಂಗನಾಥ್, ಜಗದೀಶ್, ಮಂಜುನಾಥ್, ಐಡಿಯಲ್ ಗೋಪಿ, ಮಂಜು, ನೂರ್ ಅಹಮದ್, ವಿನೋದ, ಜೋಸೆಫ್, ಡಾ. ಶಿಶಿರಾ, ಸುರೇಶ ಶೆಟ್ಟಿ, ಡಾ. ಶಿವಕುಮಾರ್, ವೆಂಕಟೇಶ್, ವಸಂತ ಹೋಬಳಿದಾರ್, ನಾಗರಾಜ್ ಕಂಕಾರಿ, ಪಾಲಾಕ್ಷಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...