Kittur Rani Chennamma ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧದ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಉತ್ಸವದ ಭಾಗವಾಗಿ ಹಮ್ಮಿಕೊಂಡಿರುವ “ಕಿತ್ತೂರು ವಿಜಯೋತ್ಸವ- ವಿಜಯ ಜ್ಯೋತಿ ಯಾತ್ರೆ”ಗೆ ಇಂದು ನಮ್ಮ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಗೌರವ ಪೂರ್ವಕವಾಗಿ ಸ್ವಾಗತಿಸಿದರು.
Kittur Rani Chennamma ಕಿತ್ತೂರು ಸಂಸ್ಥಾನವು ಸ್ವಾತಂತ್ರ್ಯ ಹೋರಾಟ ಪ್ರಾರಂಭವಾಗುವ ಮೊದಲೇ ಬ್ರಿಟಿಷರ ವಿರುದ್ಧ ಯುದ್ಧ ಸಾರಿದ ಸಂಸ್ಥಾನ. ಆಂಗ್ಲರಿಗೆ ಕಪ್ಪ ಕೊಡಲು ಒಪ್ಪದೆ ಸ್ವಾಭಿಮಾನಕ್ಕಾಗಿ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ರಾಣಿ ಚೆನ್ನಮ್ಮ ಅವರ ಸಮರ್ಪಣೆ ಎಂದಿಗೂ ಮರೆಯಲಾಗದು. ಅವರಿಗೆ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಕಿತ್ತೂರು ಉತ್ಸವ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.