Friday, December 5, 2025
Friday, December 5, 2025

Chamber of Commerce Shivamogga ಸವಾಲುಗಳನ್ನ ಎದುರಿಸಿ ಪತ್ರಿಕೆ ಈಗ ಜನಮಾನಸ ತಲುಪಿದೆ- ಕ್ರಾಂತಿ ದೀಪ ಮಂಜುನಾಥ್

Date:

Chamber of Commerce Shivamogga ಪತ್ರಿಕೋದ್ಯಮದಲ್ಲಿ ಅತ್ಯುನ್ನತ ಶ್ರೇಷ್ಠ ಪ್ರಶಸ್ತಿ ಪುಸ್ಕøತರಾದ ಹಾಗೂ ಮಧ್ಯ ಕರ್ನಾಟಕ ಮಲೆನಾಡು ಭಾಗದಲ್ಲಿ ಪ್ರಥಮ ಬಾರಿಗೆ ನೀಡಿದ ಪ್ರಶಸ್ತಿಗೆ ಭಾಜನರಾಗಿರುವ ಹಾಗೂ ವೃತ್ತಿಯ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕ್ರಾಂತಿದೀಪ ಎನ್.ಮಂಜುನಾಥ್‍ರವರಿಗೆ ನಗರದ ಸ್ನೇಹಮಹಿ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಹರಿಸಲಾಯಿತು.

ಇದೇ ಸಂದರ್ಭದಲ್ಲಿ ಸ್ನೇಹಮಹಿ ಸಂಘದ ಅಧ್ಯಕ್ಷ ಎಸ್.ಚಿನ್ನಪ್ಪ ಮಾತನಾಡಿ, ನಮ್ಮ ಸoಘದ ವತಿಯಿಂದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಗಳನ್ನು ಆಯೋಜನೆ ಮಾಡಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದೇವೆ ಎಂದು ನುಡಿದರು.

Chamber of Commerce Shivamogga ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ಕ್ರಾಂತಿದೀಪ ಮಂಜಣ್ಣನವರು ಹಲವಾರು ಹೊಸ ಪತ್ರಕರ್ತರಿಗೆ ಅವಕಾಶ ಕಲ್ಪಿಸಿಕೊಟ್ಟು ಅವರ ಬೆಳವಣಿಗೆಗೆ ದಾರಿದೀಪವಾಗಿದ್ದಾರೆ. ಜೊತೆಗೆ ಕ್ರಾಂತಿದೀಪ ಪತ್ರಿಕೆ ಸಾಕಷ್ಟು ಹೋರಾಟಗಳ ಮೂಲಕ ಹಾಗು ಅಚ್ಚು ಮಳೆಯ ಮುದ್ರಣದಲ್ಲಿ ಪತ್ರಿಕೆ ಪ್ರಾರಂಭಿಸಿ ಇದನ್ನು ರಾಜ್ಯ ಮಟ್ಟದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಈ ನಿಟ್ಟಿನಲ್ಲಿ ಮಂಜಣ್ಣನವರ ಸಾಧನೆ ಅವರ ಪತ್ರಿಕೆ ಇನ್ನೂ ಉನ್ನತಮಟ್ಟದಲ್ಲಿ ಬೆಳೆದು ಹೆಸರುಗಳಿಸಲಿ ಎಂದು ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್.ಮಂಜುನಾಥ್, ಪತ್ರಕಾ ರಂಗದಲ್ಲಿ ಅನೇಕ
ಸವಾಲುಗಳನ್ನು ಎದುರಿಸಿ, ಜನತೆಯ ಸಲಹೆ ಸಹಕಾರ ಆಶೀರ್ವಾದದಿಂದ ನಮ್ಮ ಪತ್ರಿಕೆ ಜನಮಾನಸವನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ರವಿಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...