CM Siddharamaiah ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನು ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31,962 ಕೋಟಿ, ಬಿಹಾರಕ್ಕೆ ರೂ.17,921 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987 ಕೋಟಿ ಮತ್ತು ರಾಜಸ್ತಾನಕ್ಕೆ ರೂ.10,737 ಕೋಟಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ.
CM Siddharamaiah ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರಪ್ರದೇಶಕ್ಕೆ ಶೇ.17.93, ಬಿಹಾರಕ್ಕೆ 10.05, ರಾಜಸ್ತಾನಕ್ಕೆ 6.02 ಮತ್ತು ಮಧ್ಯಪ್ರದೇಶಕ್ಕೆ 7.85ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ.3.64 ಮಾತ್ರ. ತೆರಿಗೆ ಹಂಚಿಕೆಗಾಗಿ ನಿಗದಿ ಪಡಿಸಲಾಗಿರುವ ಮಾನದಂಡದಲ್ಲಿಯೇ ಬಿಜೆಪಿ ಸರ್ಕಾರದ ಪ್ರಗತಿ ವಿರೋಧಿ ಧೋರಣೆ ಸ್ಪಷ್ಟವಾಗಿದೆ. ಅಭಿವೃದ್ಧಿಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಾಯಿಸಬೇಕೆಂದು ನಾವು ಒತ್ತಾಯಿಸುತ್ತಲೇ ಬಂದಿದ್ದರೂ ನರೇಂದ್ರ ಮೋದಿ ಅವರ ಸರ್ಕಾರ ಕಿವುಡಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಲತಾಣದಲ್ಲಿ ತಮ್ಮ ಗರಂ ಅನಿಸಿಕೆ ಹಂಚಿಕೊಂಡಿದ್ದಾರೆ.