University of Agricultural and Horticultural Sciences ರೈತರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಬಸವ ಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ನಗರದ ನವುಲೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ರೋಟರಿ ಜಿಲ್ಲಾ ಕಾರ್ಯಕ್ರಮ, ಹಸಿರು ಮತ್ತು ನೀರು ಜಾಗೃತಿ ಉಪನ್ಯಾಸ
ಪ್ರಗತಿಪರ ರೈತರಿಗೆ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ರೋಟರಿ ಸಂಸ್ಥೆಯು ಸೇವಾ ಕಾರ್ಯದ ಜತೆಯಲ್ಲಿ ಪರಿಸರ ಜಾಗೃತಿ, ರೈತರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ.ಜಗದೀಶ್, ರೈತರು ಸಮಗ್ರ ಕೃಷಿ ಪದ್ಧತಿ ತೊಡಗಿಸಿಕೊಂಡರೆ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಿದೆ. ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದರು.
University of Agricultural and Horticultural Sciences ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಮಾತನಾಡಿ, ಹಸಿರೇ ಉಸಿರು, ನಮಗೆ ಉಸಿರಾಡಲು ಗಿಡಮರಗಳು ಆಮ್ಲಜನಕ ಒದಗಿಸುತ್ತದೆ. ಹಸಿರನ್ನು ಕಾಪಾಡಿಕೊಳ್ಳುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾತನಾಡಿ, ಹಿಂದಿನ ಕಾಲದಲ್ಲಿ ರಾಸಾಯನಿಕ ಗೊಬ್ಬರ ಬಳಸದೆ ಬೆಳೆ ಬೆಳೆಯುತ್ತಿದ್ದರು. ರೈತರು ಸಾವಯವ ಕೃಷಿಯನ್ನು ಅವಲಂಬಿಸಬೇಕು ಎಂದು ಹೇಳಿದರು.