Wednesday, September 9, 2026
Wednesday, September 9, 2026

Kumsi Police ಸಿಗಂದೂರಿಗೆ ತೆರಳುತ್ತಿದ್ದ ಕಾರು ಅಪಘಾತ: ಬೆಂಗಳೂರಿನ ಯುವಕ ಸಾವು

Date:

Kumsi Police ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ನಾಲ್ವರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ.
ಬೆಂಗಳೂರು ನೆಲಮಂಗಲದ ಚಂದನ್‌ ಮೃತ ಯುವಕ. ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬುವವರು ಗಾಯಗೊಂಡಿದ್ದಾರೆ. ಐವರು ಬೆಂಗಳೂರಿನಲ್ಲಿ ನೆಲೆಸಿದ್ದರು.
ಬೆಂಗಳೂರಿನಿಂದ ಸಿಗಂದೂರಿಗೆ ಹೊರಟಿದ್ದರು
Kumsi Police ರಜೆ ಇದ್ದಿದ್ದರಿಂದ ಐವರು ಯುವಕರು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಕುಂಸಿಯ ಕೆರೆಕೋಡಿ ಬಳಿ ಚಂದನ್‌ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಚಂದನ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.
ಚಂದನ್‌ ಮೃತದೇಹವನ್ನು ಮೆಗ್ಗಾನ್‌ ಅಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...