Wednesday, February 4, 2026
Wednesday, February 4, 2026

Shimoga District Brahmin Mahasabha ಅ.25 ಶಿವಮೊಗ್ಗದಲ್ಲಿ ಆಚಾರ್ಯತ್ರಯರ ಜಯಂತ್ಯುತ್ಸವ

Date:

Shimoga District Brahmin Mahasabha ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾದಲ್ಲಿ ಆಚಾರ್ಯ ತ್ರಯರ ಜಯಂತಿಯನ್ನು ಅ. 25ರಂದು ಸಂಜೆ 5:30ಕ್ಕೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದದ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ ಭಾಗವತ, ಶಂಕರ, ಮಧ್ವ ಮತ್ತು ರಾಮಾನುಜರು
(ಆಚಾರ್ಯತ್ರಯರು) ಪ್ರತಿಪಾದಿಸಿದ ಸಿದ್ಧಾಂತ ಹಾಗೂ ಸಂದೇಶಗಳನ್ನು ಜನ ಮಾನಸಕ್ಕೆ ತಲುಪಿಸಿವ ಸದುದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಕಳೆದ 5 ವರ್ಷಗಳಿಂದ ಆಚಾರ್ಯ ತ್ರಯರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದೆ ಎಂದರು.

ಅಂದು “ಪ್ರೊ, ಪವನ್ ಕಿರಣ್‌ ಕೆರೆ”, ಉಡುಪಿ ಇವರು ಉಪನ್ಯಾಸ ನೀಡಲಿದ್ದಾರೆ. ಇವರು ಉಡುಪಿಯ ಆಸೆಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿದ್ದು, ಯಕ್ಷಗಾನ ಪ್ರಸಂಗಗಳ ರಚನಾಕಾರರು ಹಾಗೂ ತಾಳ ಮದ್ದಲೆಯಲ್ಲಿ ಅರ್ಥಧಾರಿಗಳಾದ್ದಾರೆ.

Shimoga District Brahmin Mahasabha ಈ ಉಪನ್ಯಾಸ ಕಾರ್ಯಕ್ರಮದ ನಂತರ ನವರಾತ್ರಿ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಪ್ರ ಮಹಿಳೆಯರಿಗಾಗಿ “ದೇವಿ ಕುರಿತ ಗೀತಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ ಬಿ.ಕೆ. ವೆಂಕಟೇಶಮೂರ್ತಿ, ಕೇಶವಮೂರ್ತಿ, ಪ್ರೊ. ನಾಗಮಣಿ, ಸರಳಾದೇವಿ, ಮೊದಲಾವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...