Yasir Ahmad Khan Pathan ರಾಜ್ಯದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದ್ದು, ಪಕ್ಷದ ನಾಯಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿದೆ. ಇದಕ್ಕೂ ಮೊದಲು ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.
ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದ್ದು, ಕಳೆದ ಬಾರಿ ಬಸವರಾಜ್ ಬೊಮ್ಮಾಯಿ ಎದುರು ಅವರು 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.
ಈ ಬಾರಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆ ನಡೆದಿತ್ತು. ಅದಾಗ್ಯೂ, ಕೊನೆಗೂ ಯಾಸೀರ್ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ
ಯಾಸೀರ್ ಅವರು ಎರಡನೇ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
Yasir Ahmad Khan Pathan ಅವರ ತಾಯಿ ಕೂಡ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಮುಸ್ಲಿಮರ ಮತಗಳು ಗಣನೀಯವಾಗಿದ್ದು 30%ಕ್ಕಿಂತ ಹೆಚ್ಚಿವೆ. ಜೊತೆಗೆ ಬೊಮ್ಮಾಯಿ ವಿರುದ್ಧ ಕ್ಷೇತ್ರದಲ್ಲಿ ಅಸಮಾಧಾನ ಹೆಚ್ಚಾಗಿವೆ. ಹಾಗಾಗಿ ಅವರ ಗೆಲುವು ಸುಲಭವಾಗಿರುತ್ತದೆ ಎಂದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲು ಬಯಸಿದ್ದರು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹೇರಿದ್ದರು ಎಂದು ವರದಿಯಾಗಿತ್ತು. ಒಂದು ವೇಳೆ ಮುಸ್ಲಿಮೇತರರಿಗೆ ಟಿಕೆಟ್ ನೀಡಿದ್ದರೆ ಮುಸ್ಲಿಮರ ಅಸಮಾಧಾನಕ್ಕೂ ಗುರಿಯಾಗುವ ಭಯ ಕಾಂಗ್ರೆಸ್‌ಗೆ ಇತ್ತು.