Prerana Shivamogga Institute ಪ್ರತಿಯೊಬ್ಬರೂ ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯ ರಕ್ಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಮಾಜಿ ಶಾಸಕ ಡಿ.ಬಿ.ಗಂಗಪ್ಪ ಹೇಳಿದರು.
ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಶಿವಮೊಗ್ಗ ಸಂಸ್ಥೆ ಹಾಗೂ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಹಯೋಗದಲ್ಲಿ ನ್ಯಾಮತಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ, ದಂತ ತಪಾಸಣೆ ಹಾಗೂ ಹೃದಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಆರೋಗ್ಯ ಸಂಪತ್ತು ಜೀವನದಲ್ಲಿ ಬಹಳ ಮುಖ್ಯ. ಕಾಯಿಲೆಯನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿದಾಗ ಮುಂದೆ ಆಗುವ ಅನಾಹುತ ತಪ್ಪಿಸಬಹುದು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಪದ್ಧತಿ, ಜೀವನಶೈಲಿ, ಒತ್ತಡ, ಪರಿಸರದ ತಾಪಮಾನ ಏರಿಳಿತದಿಂದ ಕಾಯಿಲೆಗಳು ನಮಗೆ ಗೊತ್ತಿಲ್ಲದ ಹಾಗೆ ಬರುತ್ತವೆ. ಆದ್ದರಿಂದ ನಾವುಗಳು ಆಗಾಗ ಆರೋಗ್ಯವನ್ನು ನುರಿತ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡು ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು.
ನಾರಾಯಣ ಹೃದಯಾಲಯದ ಡಾ. ನಂದಾ ಮಾತನಾಡಿ, ಮಕ್ಕಳು ಬಾಲ್ಯದಲ್ಲೇ ವಿದ್ಯಾಭ್ಯಾಸದ ಜತೆಗೆ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ದೈಹಿಕ ಚಟುವಟಿಕೆ, ಉತ್ತಮ ಆರೋಗ್ಯ ಸೇವನೆ, ಯೋಗ ಪ್ರಾಣಾಯಾಮ ಧ್ಯಾನದ ಕಡೆ ಗಮನಹರಿಸಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ ಅಧ್ಯಕ್ಷೆ ಉಮಾ ವೆಂಕಟೇಶ್ ಮಾತನಾಡಿ, ಸಂಸ್ಥೆ ವತಿಯಿಂದ ಈಗಾಗಲೇ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಜೊತೆಗೆ ಗ್ರಾಮೀಣ ಪ್ರದೇಶ ಹಾಗೂ ಬೇರೆ ಬೇರೆ ಜಿಲ್ಲೆಗಳಲ್ಲಿ ನಮ್ಮ ಸಮಾಜಕ್ಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು. ಸಹ್ಯಾದ್ರಿ ನಾರಾಯಣ ಹೃದಯಾಲಯದ ವೈದ್ಯರ ತಂಡಕ್ಕೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
Prerana Shivamogga Institute ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದ್ದು, ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಹಲ್ಲುಗಳನ್ನ ಸರಿಯಾಗಿ ಪರೀಕ್ಷಿಸಿ ಚಿಕಿತ್ಸೆ ಪಡೆದರೆ ಮುಂದೆ ಬರುವ ತೊಂದರೆ ನಿವಾರಿಸಬಹುದು ಎಂದರು.
ಮಕ್ಕಳ ತಜ್ಞ ಡಾ. ನಿತಿನ್, ಹೃದಯರೋಗ ತಜ್ಞ ಡಾ. ಮನೋಹರ್, ಶಿವರಾಜ್ ಹೊಮ್ಮರಡಿ, ರವಿ ತೋಂಟದಾರ್ಯ, ಅರವಿಂದ ಕೋರಿ, ಮಾಲತೇಶ ರೆಟ್ಟಿ, ಎಚ್.ಶಕುಂತಲಾ, ಡಿ.ಶಂಕರಪ್ಪ, ಶೋಭಾ, ಕಾವ್ಯಾ, ಮಾನಸ ಇತರರಿದ್ದರು.
Prerana Shivamogga Institute ಕಾಯಿಲೆಯನ್ನು ಪ್ರಾರಂಭದಲ್ಲೇ ಪತ್ತೆಹಚ್ಚಿದರೆ ಮುಂದಾಗುವ ಅನಾಹುತ ತಪ್ಪಿಸಬಹುದು- ಡಿ.ಬಿ.ಗಂಗಪ್ಪ
Date: