Satish Sail ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು (ಅ.26) 82ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹ:
Satish Sail ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ, ಸಂಸದ ಸ್ಥಾನ ರದ್ದಾಗಲಿದೆ. ಇದೀಗ ಸೈಲ್ಗೆ 7 ವರ್ಷ ಜೈಲು ಶಿಕ್ಷೆಯಾಗಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.
Satish Sail ಬೇಲೇಕೇರಿ ಅದಿರು ನಾಪತ್ತೆ ಕೇಸ್. ಶಾಸಕ ಸತೀಶ್ ಸೈಲ್ ದೋಷಿ. ಕೋರ್ಟ್ ತೀರ್ಪಿನ ಹಿನ್ನೆಲೆ ಶಾಸಕ ಸ್ಥಾನಕ್ಕೆ ಕುತ್ತು?
Date: