High School Physical Education Teachers Association Shimoga ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಕ್ರೀಡಾಪಟುಗಳಿಗೆ ತಿಳಿಸಿದರು.
ಅವರು ನೆಹರೂ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 17ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ತಾಲ್ಲೂಕು ಮಟ್ಟದ ಪ್ರೌಢ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.
ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
High School Physical Education Teachers Association Shimoga ಇದೇ ಸಂಧರ್ಭದಲ್ಲಿ ನಿವೃತ್ತಿ ಆರೋಗ್ಯ ಅಧಿಕ್ಷಕರಾದ ಗುಂಡಾಚಾರ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಾಳಾನಾಯ್ಕ, ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
High School Physical Education Teachers Association Shimoga ನಿರಂತರ ಅಭ್ಯಾಸದಿಂದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಸಾಧ್ಯ- ರಮೇಶ್
Date: