CM Siddharamaiah ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ರಾಜ್ಯದಲ್ಲಿ ಪ್ರಸ್ತುತ 63,647 ಕೆರೆ, ಕಲ್ಯಾಣಿಗಳ ಅಭಿವೃದ್ದಿ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ. ಅತಿವೃಷ್ಟಿಯಿಂದಾಗಿ 12,553ಕಿಮೀ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ 1,106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ ಉಂಟಾಗಿರುವ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು.
ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ.
CM Siddharamaiah ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ
ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ