Monday, February 2, 2026
Monday, February 2, 2026

Shimoga District Legal Service Authority ನ.7 ರಂದು ತಂಬಾಕು ಮುಕ್ತ ಯುವ ಅಭಿಯಾನ 2.0

Date:

Shimoga District Legal Service Authority ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸುಬ್ಬಯ್ಯ ದಂತ ವೈದ್ಯಕೀಯ & ನರ್ಸಿಂಗ್ ಕಾಲೇಜು, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಹಾಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನ. 7 ರಂದು ಬೆಳಗ್ಗೆ 7.30 ಕ್ಕೆ ನಗರದ ನೆಹರು ಕೀಡಾಂಗಣದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ನೆರವೇರಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ಅಧ್ಯಕ್ಷತೆ ವಹಿಸುವರು.
Shimoga District Legal Service Authority ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್, ಜಿಲ್ಲಾ ಪೋಲಿಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಕವಿತಾ ಯೋಗಪ್ಪನವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ ಶಿವಮೂರ್ತಿ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕ ಡಾ. ಸಿದ್ದನ ಗೌಡ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಟಿ.ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಶಿವಮೊಗ್ಗ ತಹಶೀಲ್ದಾರರಾದ ಗಿರೀಶ್ ಬಿ.ಎನ್ ಇವರುಗಳ ಗೌರವ ಉಪಸ್ಥಿಯಲ್ಲಿ ಜಾಥಾ ನೆಹರು ಕ್ರೀಡಾಂಗಣದಿAದ ಹೊರಟು, ಗೋಪಿ ವೃತ್ತ ಮತ್ತು ಜಿಲ್ಲಾ ಪಂಚಾಯತ್ ರಸ್ತೆ ಮೂಲಕ ನೆಹರು ಕ್ರೀಡಾಂಗಣದಲ್ಲಿ ಸಮಾಪ್ತಿಯಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...