Saturday, December 6, 2025
Saturday, December 6, 2025

Rotary East English School ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಿ ಬಾಳಿದರೆ ಶ್ರಮ ಸಾರ್ಥಕ- ಸಿ.ಎ.ದೇವ್ ಆನಂದ್

Date:

Rotary East English School ಶಾಲೆಗಳಲ್ಲಿ ಸ್ಥಾಪಿತವಾಗಿರುವ ಇಂಟರ್ಯಾಕ್ಟ್ ಕ್ಲಬ್‌ಗಳು ಮಕ್ಕಳಲ್ಲಿ ಅಂತರಾಷ್ಟ್ರೀಯ ಸಂಪರ್ಕವನ್ನು ವೃದ್ಧಿಸಿಕೊಂಡು ಅವರಲ್ಲಿರುವ ಹಿಂಜರಿಕೆ ಮತ್ತು ಕೀಳರಿಮೆ ಮನೋಭಾವವನ್ನು ತೊಡದು ಹಾಕಿ ತಮ್ಮ ವ್ಯಕ್ತಿತ್ವ ಹಾಗೂ ನಾಯಕತ್ವವನ್ನು ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ರೋಟರಿ ಜಿಲ್ಲೆ 3121ರ ಜಿಲ್ಲಾ ಗವರ್ನರ್ ಆದ ರೊ. ಸಿ.ಎ. ದೇವ್ ಆನಂದ್ ಇವರು ಅಭಿಪ್ರಾಯ ಪಟ್ಟರು.

ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ಇಂರ‍್ಯಾಕ್ಟ್ ಕ್ಲಬ್ ವತಿಯಿಂದ ಏರ್ಪಡಿಸಿದ ಸಮಾರಂಭದಲ್ಲಿ ಇಂರ‍್ಯಾಕ್ಟ್ ಸದಸ್ಯರು ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಮ್ಮ ಮಾತನ್ನು ಮುಂದುವರೆಸಿದ ಅವರು, ರೋಟರಿ ಪೂರ್ವ ಸಂಸ್ಥೆಯ ಹಿರಿಯರು ಕಳೆದ ೪೫ ವರ್ಷಗಳ ಹಿಂದೆ ಒಂದು ವಿದ್ಯಾ ಸಂಸ್ಥೆಯನ್ನು ಸ್ಥಾಪಿಸುವುದರ ಜೊತೆಗೆ ಭವ್ಯವಾದ ಹಾಗೂ ವಿಶಾಲವಾದ ಕಟ್ಟಡವನ್ನು ನಿರ್ಮಿಸಿ, ಸುತ್ತ-ಮುತ್ತಲಿನ ಮಕ್ಕಳಿಗೆ ಶಾಲಾ ಸೌಲಭ್ಯವನ್ನು ಒದಗಿಸಿದ್ದು, ಈ ಸೌಲಭ್ಯವನ್ನು ಅನುಭವಿಸುತ್ತಿರುವ ವಿದ್ಯಾರ್ಥಿಗಳಾದ ನೀವೆಲ್ಲರೂ ಋಣಿಗಳಾಗಿರಬೇಕಾಗಿದ್ದು, ನಿಮ್ಮ ವ್ಯಕ್ತಿತ್ವವನ್ನು ವಿಕಸಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾದಾಗ ಮಾತ್ರ ಹಿರಿಯ ರೋಟೇರಿಯನ್‌ರ ಹಾಗೂ ಪ್ರಸಕ್ತ ಆಡಳಿತ ಮಂಡಳಿಯವರ ಶ್ರಮ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ ರೋಟರಿ ವಲಯ 11ರ ಸಹಾಯಕ ಗವರ್ನರ್ ರೊ. ಪ್ರೊ. ಹೆಚ್.ಎಂ. ಸುರೇಶ್ ರವರು ಮಾತನಾಡುತ್ತ, ವಿದ್ಯಾರ್ಥಿ ದೆಸೆಯಲ್ಲಿದ್ದಾಗ ಮಕ್ಕಳು ಶಾಲೆಯಲ್ಲಿನ ವಿವಿಧ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ತಮ್ಮ ಹೆತ್ತವರಿಗೆ ಹಾಗೂ ಸಮಾಜಕ್ಕೆ ಆಸ್ತಿಯಾಗಿ ರೂಪುಗೊಳ್ಳಬೇಕೆಂದು ಕರೆ ಕೊಟ್ಟರು.

ಇಂರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾದ ಕುಮಾರ್ ಎನ್., ಇವರು ಅತಿಥಿಗಳೆಲ್ಲರನ್ನು ಸ್ವಾಗತಿಸುತ್ತ, ಇಂರ‍್ಯಾಕ್ಟ್ ಕ್ಲಬ್‌ನ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡ ಎಲ್ಲಾ ಸಮಾಜಮುಖಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Rotary East English School ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ರೊ. ಚಂದ್ರಶೇಖರಯ್ಯ ಎಂ., ಇವರು ಮಾತನಾಡುತ್ತಾ, ಈ ಶಾಲೆಯಲ್ಲಿ ಮಕ್ಕಳ ಕಲಿಕೆಯ ಗುಣಮಟ್ಟವನ್ನು ಉತ್ತಮ ಪಡಿಸಲು ಶಿಕ್ಷಕರು ಎಲ್ಲ ಮಕ್ಕಳಿಗೆ ವ್ಯಯಕ್ತಿಕ ಗಮನ ಹರಿಸುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವೇದಿಕೆಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಸಮಾರಂಭದಲ್ಲಿ ಶ್ರೀಮತಿ ರೇಖಾ ದೇವ್ ಆನಂದ್, ಜೋನಲ್ ಲೆಫ್ಟಿನೆಂಟ್ ರೊ. ಮಂಜುನಾಥ್ ರಾವ್ ಕದಂ, ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ರೊ. ಅರುಣ್ ದೀಕ್ಷಿತ್, ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್, ಟ್ರಸ್ಟ್ನ ಉಪಾಧ್ಯಕ್ಷರು ರೊ. ಡಾ|| ಪರಮೇಶ್ವರ್ ಡಿ. ಶಿಗ್ಗಾಂವ್, ಟ್ರಸ್ಟ್ನ ಕಾರ್ಯದರ್ಶಿ ರೊ. ರಾಮಚಂದ್ರ ಎಸ್.ಸಿ., ಕ್ಲಬ್‌ನ ಇಂರ‍್ಯಾಕ್ಟ್ ಛೇರ್‌ಮನ್ ರೊ. ಶೇಷಾದ್ರಿ ಡಿ.ಕೆ., ಟ್ರಸ್ಟ್ ಖಜಾಂಚಿ ಹಾಗೂ ಮಾಜಿ ಸಹಾಯಕ ಗವರ್ನರ್ ರೊ. ವಿಜಯ್ ಕುಮಾರ್ ಜಿ., ಜಂಟಿ ಕಾರ್ಯದರ್ಶಿ ರೊ. ನಾಗವೇಣಿ ಎಸ್.ಆರ್., ಪ್ರಾಂಶುಪಾಲ ಸೂರ್ಯನಾರಾಯಣ್ ಆರ್., ಇಂರ‍್ಯಾಕ್ಟ್ ಕೋ-ಆರ್ಡಿನೇಟರ್ ಶ್ರೀಮತಿ ಹರ್ಷಿತಾ ಕೆ.ಎಂ., ಇಂರ‍್ಯಾಕ್ಟ್ ಕಾರ್ಯದರ್ಶಿ ಗೌತಮಿ ಹಾಗೂ ರೋಟರಿ ಪೂರ್ವದ ಅನೇಕ ಸದಸ್ಯರುಗಳು ಹಾಜರಿದ್ದರು.

ವಿದ್ಯಾರ್ಥಿನಿ ಅನನ್ಯ ಜಿ. ಹೆಬ್ಬಾರ್ ಕಾರ್ಯಕ್ರಮವನ್ನು ನಿರೂಪಿಸಿದರೆ, ಇಂರ‍್ಯಾಕ್ಟ್ ಕಾರ್ಯದರ್ಶಿ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...