Scheduled Castes Welfare Department ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು WWW.SSP.Karnataka.gov.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದಾಖಲಾತಿಗಳನ್ನು ದೃಢೀಕರಣ ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿ, ಮೂಲ ದಾಖಲಾತಿಗಳೊಂದಿಗೆ ಈ ಕಛೇರಿಗೆ ಹಾಜರಾಗಿ ಇ-ದೃಢೀಕರಣವನ್ನು ಪಡೆಯಲು ಸೂಚಿಸಿದೆ.
Scheduled Castes Welfare Department ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. 2004ರವರೆಗೆ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. 2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ/ಪದವಿ/ಇತರೆ ಕೋರ್ಸುಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತಿರುವ ವಿದ್ಯಾರ್ಥಿಗಳು, ಹೊರ ರಾಜ್ಯ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಸ್ಟಾಂಡ್ ಅಲೊನ್ ಇನ್ಸ್ಟಿಟ್ಯೂಟ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾಖಲೆಗಳನ್ನು ನೀಡಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ತಿಳಿಸಿದ್ದಾರೆ.
Scheduled Castes Welfare Department ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆಅರ್ಜಿ ಸಲ್ಲಿಸಲು ಪ್ರಕಟಣೆ
Date: