Thursday, September 17, 2026
Thursday, September 17, 2026

S.N.Chennabasappa ಮೆಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಗೆ ‘ಕ್ಲಾಸ್’ ತೆಗೆದುಕೊಂಡ ಶಾಸಕ “ಚೆನ್ನಿ

Date:

S.N.Chennabasappa ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ (ಮೆಗ್ಗಾನ್ ಆಸ್ಪತ್ರೆ) ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

S.N.Chennabasappa ಇದೇ ವೇಳೆ

  1. ಬಿಪಿಎಲ್ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ನೀಡಬೇಕಾಗಿರುವುದು ಆಸ್ಪತ್ರೆ ಕರ್ತವ್ಯವಾಗಿದ್ದು, ಆದರೆ ಹಣ ಪಡೆಯುತ್ತಿರುವ ಸಂಗತಿ ಗಮನಕ್ಕೆ ಬಂದಿದ್ದು, ಈ ಕುರಿತು ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
  2. ಬಿಪಿಎಲ್ ಕಾರ್ಡುದಾರರಿಗೆ ಚಿಕಿತ್ಸೆ ನೀಡುವಲ್ಲಿ ಆಗುತ್ತಿರುವ ವಿಳಂಬ ಮತ್ತು ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿದರು.
  3. ಆಸ್ಪತ್ರೆಯ ಕೌಂಟರ್ನಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ನಿರ್ದೇಶನ ನೀಡಿದರು.
  4. ಆಸ್ಪತ್ರೆಯ ಸ್ಕ್ಯಾನಿಂಗ್ ವಿಭಾಗದಲ್ಲಿ ಆಗುತ್ತಿರುವ ವಿಳಂಬದ ಕುರಿತು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಕಟ್ಟುನಿಟ್ಟಾಗಿ ಸರಿಪಡಿಸುವಂತೆ ಆದೇಶಿಸಿದರು.
  5. ಆಸ್ಪತ್ರೆಯ ಮೆಡಿಕಲ್ ಸ್ಟೋರ್ ನಲ್ಲಿ ಹಲವಾರು ಔಷಧಿಗಳ ಅಲಭ್ಯತೆ ಬಗ್ಗೆ ಚರ್ಚಿಸಿ ರೋಗಿಗಳ ಅಹವಾಲುಗಳನ್ನು ಸ್ವೀಕರಿಸಿ, ಆಸ್ಪತ್ರೆಯ ಔಷಧಿ ಉಗ್ರಾಣವನ್ನು ಪರಿಶೀಲನೆ ನಡೆಸಿದರು.
  6. ಆಸ್ಪತ್ರೆಯಲ್ಲಿ ಇರುವಂತಹ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
  7. ಆಸ್ಪತ್ರೆಯಲ್ಲಿನ ಸ್ವಚ್ಚತೆ ಕುರಿತು ಪರಿಶೀಲನೆ ನಡೆಸಿದರು.
  8. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಆರೋಗ್ಯ ವಿಚಾರಿಸಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...