Saturday, May 16, 2026
Saturday, May 16, 2026

Basavaraj Bommai ಒಂದು ದೇಶ ,ಒಂದು ಚುನಾವಣೆ ವ್ಯವಸ್ಥೆಯಿಂದ ಆಡಳಿತದಲ್ಲಿ ಸ್ಥಿರತೆ- ಬಸವರಾಜ ಬೊಮ್ಮಾಯಿ

Date:

Basavaraj Bommai ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಂಸದ ಹಾಗೂ ಮಾಜಿ‌ ಸೀಎಂ, ಬಸವರಾಜ ಬೊಮ್ಮಾಯಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ. ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ.

Basavaraj Bommai ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ತು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ.
ಎಂದು ಬೊಮ್ಮಾಯಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...