Rabindra Kalakshetra Bangalore ಶಿವಮೊಗ್ಗ ನಗರದ ಹಾಸ್ಯ ಕಲಾವಿದೆ ಕವಿತಾ ಸುಧೀಂದ್ರ ಅವರು ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸೆಂಬರ್ 27ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವ ಶಿವಮೊಗ್ಗದ ಹಾಸ್ಯ ಕಲಾವಿದೆ ಕವಿತಾ ಸುಧೀಂದ್ರ ಅವರಿಗೆ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ.ವೆಂಕಟೇಶ್ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಶಿವಮೊಗ್ಗದ ಕವಿತಾ ಸುಧೀಂದ್ರ ಅವರು ಮಹಿಳಾ ಹಾಸ್ಯ ಕಲಾವಿದರಾಗಿದ್ದು, ವಿವಿಧ ಚಾನಲ್‌ಗಳಲ್ಲಿ ಹಾಗೂ ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡುವ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಜೀವನ ಕೌಶಲ್ಯ ಹಾಗೂ ಮೌಲ್ಯ ಕುರಿತು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ತೀರ್ಥಹಳ್ಳಿ ಬಿ.ಇ.ಒ .ಕಚೇರಿಯಲ್ಲಿ ವಿಶೇಷ ಮಕ್ಕಳಿಗೆ ಸಮನ್ವಯ ಸಂಪನ್ಮೂಲ ಶಿಕ್ಷಕಿಯಾಗಿ ವಿಕಲಚೇತನ ಮಕ್ಕಳ ಮಧ್ಯೆ ಸೇವೆ ಸಲ್ಲಿಸುತ್ತಿದ್ದಾರೆ. ಉಪನ್ಯಾಸಕರಾಗಿದ್ದಾರೆ.
ಎನ್‌ಎಸ್‌ಎಸ್ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ನೃತ್ಯ ಕಲಾವಿದೆ, ಹಾಡುಗಾರ್ತಿ, ಬರಹಗಾರ್ತಿಯಾಗಿದ್ದಾರೆ.
Rabindra Kalakshetra Bangalore ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಿಸೆಂಬರ್ 27ರಂದು ಸಂಜೆ 5ರಿಂದ 9.30ರವರೆಗೆ ಸುರ್ವೆ ಕಲ್ಚರಲ್ ಅಕಾಡೆಮಿಯಿಂದ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದ 11ನೇ ಆವೃತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸಾಂಸ್ಕೃತಿಕ ಪರಂಪರೆಗೆ ಕನ್ನಡದ ಮಹಾಕಾವ್ಯಗಳ ಕೊಡುಗೆ ಕುರಿತು ವಿಚಾರ ಸಂಕಿರಣ ನಡೆಯಲಿದೆ.
ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ ಉದ್ಘಾಟನೆ ಹಾಗೂ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಹಿರಿಯ ರಂಗಭೂಮಿ ಕಲಾವಿದೆ, ಸುರ್ವೆ ಕಲ್ಚರಲ್ ಅಕಾಡೆಮಿ ಗೌರವಾಧ್ಯಕ್ಷೆ ಡಾ. ಸುಮತಿಶ್ರೀ ನವಲಿ ಹಿರೇಮಠ, ಅಕಾಡೆಮಿ ಅಧ್ಯಕ್ಷ ಕಿಶನ್ ಸುರ್ವೆ, ಸ್ಥಾಪಕ ಅಧ್ಯಕ್ಷ ರಮೇಶ ಸುರ್ವೆ ಉಪಸ್ಥಿತರಿರುವರು.