Kuvempu ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನದ ಪ್ರಯುಕ್ತ ಡಿ.೨೮ರಂದು ಬೆಳಿಗ್ಗೆ 9:30ಕ್ಕೆ ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಪದವಿ ಹಾಗೂ ಬಿ.ಎಡ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ ಆಯೋಜಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ಹಾಗೂ ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ನಿಲುವುಗಳನ್ನು ಪರಿಚಯಿಸುವ ಉದ್ದೇಶದಿಂದ ನಾಟಕ ಸ್ಪರ್ಧೆ ಆಯೋಜಿಸಲಾಗಿದ್ದು, ಸಹ್ಯಾದ್ರಿ ರಂಗತರಂಗ ಶಿವಮೊಗ್ಗ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ನಾಟಕ ಸ್ಪರ್ಧೆ ನಡೆಯಲಿದೆ. ಶಾಸಕ ಬಿ.ವೈ. ವಿಜಯೇಂದ್ರ ಸ್ಪರ್ಧೆ ಉದ್ಘಾಟಿಸಲಿದ್ದಾರೆ.
Kuvempu ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ನಾಟಕ ಪ್ರದರ್ಶಿಸಲಿವೆ. ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ ರೂ. ೮,೦೦೦, ದ್ವಿತೀಯ ಬಹುಮಾನ ರೂ. ೬, ೦೦೦ ಮತ್ತು ತೃತೀಯ ಬಹುಮಾನ ರೂ. ೪,೦೦೦ ನಗದು ನೀಡಲಾಗುವುದು. ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕೆಂದು ಸಹ್ಯಾದ್ರಿ ರಂಗತರಂಗ ದ ಗೌರವಾಧ್ಯಕ್ಷ ಕಾಂತೇಶ್ ಕದರಮಂಡಲಗಿ ಕೋರಿದ್ದಾರೆ.
Kuvempu ಶಿಕಾರಿಪುರದಲ್ಲಿ ಕುವೆಂಪು ಜನ್ಮದಿನ ವಿಶೇಷ. ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ನಾಟಕ ಸ್ಪರ್ಧೆ
Date: