CM Siddharamaiah ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆಗೆ ಅನುಮತಿ ಇದ್ದರೂ ಬಸ್ ನಿಲ್ಲಿಸುತ್ತಿಲ್ಲ. ಇದರಿಂದ ಸರ್ವಿಸ್ ರಸ್ತೆ ಮೂಲಕ ಗ್ರಾಮಕ್ಕೆ ಬಸ್ ಬಾರದಿರುವುದರಿಂದ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈಗಾಗಲೇ ಚಳ್ಳಕೆರೆ ಘಟಕದಿಂದ ಕಾರ್ಯಾಚರಣೆಯಾಗುವ ಎಲ್ಲಾ ವೇಗದೂತ ಸಾರಿಗೆಗಳು ಸಾಣಿಕೆರೆ ಗ್ರಾಮದಲ್ಲಿ ಸಂಚರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ.
CM Siddharamaiah ಇತರೆ ನಿಗಮದ ಎಲ್ಲಾ ವೇಗದೂತ ಸಾರಿಗೆಗಳನ್ನು ಸದರಿ ಗ್ರಾಮದ ಸೇವಾ ರಸ್ತೆಯಲ್ಲಿ ಕಾರ್ಯಾಚರಣೆ ಮಾಡುವಂತೆ ಚಾಲನಾ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಚಿತ್ರದುರ್ಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ‘ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಬಹುದು.