Tuesday, March 24, 2026
Tuesday, March 24, 2026

Rabindra Kalakshetra ಕವಿತಾ ಸುಧೀಂದ್ರ ಇನ್ನಷ್ಟು ಹೆಚ್ಚು ಕಾರ್ಯಕ್ರಮ ನೀಡಿ ಯಶಸ್ಸು ಸಾಧಿಸಲಿ- ಡಾ.ಎಂ.ವೆಂಕಟೇಶ್

Date:

Rabindra Kalakshetra ರಾಜ್ಯಾದ್ಯಂತ ಹಾಸ್ಯ ಕಾರ್ಯಕ್ರಮಗಳ ಮೂಲಕ ಮೌಲ್ಯಗಳ ಅರಿವು ಮೂಡಿಸುವ ಜತೆಯಲ್ಲಿ ವಿಶೇಷ ಸಾಧನೆ ಮಾಡಿರುವ ಜಿಲ್ಲೆಯ ಹಾಸ್ಯ ಕಲಾವಿದೆ ಕವಿತಾ ಸುಧೀಂದ್ರ ಅವರಿಗೆ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಸುರ್ವೆ ಕಲ್ಚರಲ್ ಅಕಾಡೆಮಿಯಿಂದ ಆಯೋಜಿಸಿದ್ದ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದ 11ನೇ ಆವೃತ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ಪ್ರದಾನ ಮಾಡಯಿತು.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಸಮಾರಂಭ ನಡೆಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿರುವ ಕವಿತಾ ಅವರು ಇನ್ನಷ್ಟು ಹೆಚ್ಚು ಕಾರ್ಯಕ್ರಮ ನಡೆಸಿಕೊಡುವ ಮೂಲಕ ಯಶಸ್ಸು ಕಾಣಲಿ ಎಂದು ಕನ್ನಡ ಜಾನಪದ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ ವೆಂಕಟೇಶ್, ಕಾರ್ಯದರ್ಶಿ ಖಜಾಂಚಿ, ಪದಾಧಿಕಾರಿಗಳು ಅಭಿನಂದನೆ ತಿಳಿಸಿದ್ದಾರೆ.

Rabindra Kalakshetra ಶಿವಮೊಗ್ಗದ ಕವಿತಾ ಸುಧೀಂದ್ರ ಅವರು ಮಹಿಳಾ ಹಾಸ್ಯ ಕಲಾವಿದರಾಗಿದ್ದು, ವಿವಿಧ ಚಾನಲ್‌ಗಳಲ್ಲಿ ಹಾಗೂ ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಜೀವನ ಕೌಶಲ್ಯ ಹಾಗೂ ಮೌಲ್ಯ ಕುರಿತು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ತೀರ್ಥಹಳ್ಳಿ ಬಿ.ಇ.ಒ .ಕಚೇರಿಯಲ್ಲಿ ವಿಶೇಷ ಮಕ್ಕಳಿಗೆ ಸಮನ್ವಯ ಸಂಪನ್ಮೂಲ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಎನ್‌ಎಸ್‌ಎಸ್ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಭರತನಾಟ್ಯ ಕಲಾವಿದೆ, ಹಾಡುಗಾರ್ತಿ, ಬರಹಗಾರ್ತಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...