Thursday, January 23, 2025
Thursday, January 23, 2025

DIPR Karnataka ರಾಜ್ಯ ಸರ್ಕಾರದಿಂದ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಘೋಷಣೆ

Date:

DIPR Karnataka ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ.

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ವಿಜೇತರ ವಿವರ ಹೀಗಿದೆ…

ವಿಜಯಲಕ್ಷ್ಮಿ ಶಿಬರೂರು (2017) : ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಅರಣ್ಯ ಸಂರಕ್ಷಣೆ, ಅಪಾಯಕಾರಿ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ಅಪಾಯಗಳು ಮತ್ತಿತರ ಜಾಗೃತಿ ಮೂಡಿಸುವ ವರದಿಗಳನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಬಿತ್ತರಿಸಿದ್ದಾರೆ. ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ.

DIPR Karnataka ಬಿ.ಎಂ.ಟಿ ರಾಜೀವ್ (2018): ಮೂಲತ: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೆನವಾರ ಗ್ರಾಮದವರು, ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಾರತೀಯ ಅರಣ್ಯ ಸೇವೆಯಿಂದ 2006ರಲ್ಲಿ ನಿವೃತ್ತಿ ಹೊಂದಿದ್ದಾರೆ. 1985 ರಿಂದ ವನ್ಯಜೀವಿಗಳು, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಲೇಖನ, ಪ್ರಬಂಧಗಳನ್ನು ಬರೆಯುತ್ತಿದ್ದಾರೆ. ಅರಣ್ಯ/ವನ್ಯಜೀವಿ/ಪರಿಸರದಿಂದ ಮನುಕುಲಕ್ಕಿರುವ ಅನುಕೂಲಗಳು, ಅವಶ್ಯಕತೆಗಳ ಬಗ್ಗೆ ಲೇಖನಗಳನ್ನು ಬರೆದಿದ್ದಾರೆ. ಭಾರತೀಯ ವನ್ಯಪ್ರಾಣಿಗಳ ಕೈಪಿಡಿ, ಪರಿಸರ ಮಾಲಿನ್ಯ ಮತ್ತು ವಾಯುಗುಣ ಬದಲಾವಣೆ ಕುರಿತು ಒಟ್ಟು 6 ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ವಿನೋದಕುಮಾರ್ ಬಿ. ನಾಯ್ಕ (2019) : ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಬ್ಬಿಹಳ್ಳಿ ಗ್ರಾಮದವರು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯಲ್ಲಿ ವಿಶೇಷ ಯೋಜನೆಗಳ ವಿಭಾಗದ ಸಂಪಾದಕರಾಗಿರುವ ಇವರು ವಿವಿಧ ಮಾಧ್ಯಮಗಳಲ್ಲಿ ಸುಮಾರು 23 ವರ್ಷಗಳ ಕಾಲ ವನ್ಯಜೀವಿ ಹಾಗೂ ಪರಿಸರ ಕುರಿತು ಅನೇಕ ಪರಿಣಾಮಕಾರಿ ವರದಿಗಳನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಾದೇಶಿಕ ಮಾಧ್ಯಮಗಳಲ್ಲಿ ಮೊದಲ ಬಾರಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನಗಳನ್ನು ಹಮ್ಮಿಕೊಂಡು ಕಾಡಂಚಿನ ಗ್ರಾಮಗಳಲ್ಲಿ ಮಾನವ –ವನ್ಯಜೀವಿ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ‘ಜಂಗಲ್ ಡೈರಿ’ ಕೃತಿ ಪ್ರಕಟಿಸಿದ್ದಾರೆ.

ಮಾಲತೇಶ ಅಂಗೂರ (2020): ಹಾವೇರಿ ಜಿಲ್ಲೆಯ ಮಾಲತೇಶ ಗದಿಗೆಪ್ಪ ಅಂಗೂರ ಅವರು ಸುಮಾರು 34 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಕಳೆದ 18 ವರ್ಷಗಳಿಂದ ಕೌರವ ಕನ್ನಡ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಪರಿಸರಕ್ಕೆ ಸಂಬಂಧಿಸಿದಂತೆ ವನ್ಯಜೀವಿಗಳು, ಕೆರೆಕಟ್ಟೆಗಳು, ಪ್ರಾಣಿಪಕ್ಷಿಗಳು, ಕೀಟಗಳು, ಸಸ್ಯಗಳು, ನಿಸರ್ಗ, ಗುಡ್ಡ ಗಹ್ವರಗಳು, ಅತಿವೃಷ್ಠಿ ಅನಾವೃಷ್ಠಿ ಸೇರಿದಂತೆ ವಿವಿಧ ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ. ‘ಕಾಡು-ಮೇಡು’ ಕೃತಿ ಪ್ರಕಟವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mallikarjun Kharge ಸಂವಿಧಾನ & ಪ್ರಜಾಪ್ರಭುತ್ವ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

Mallikarjun Kharge ಬೆಳಗಾವಿ, ಜ.21 ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ...

MESCOM ಜನವರಿ 24. ಶಿವಮೊಗ್ಗ ನಗರ ಉಪವಿಭಾಗೀಯ ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ – 3 ಕಛೇರಿಯಲ್ಲಿ ಜ....