Wednesday, September 16, 2026
Wednesday, September 16, 2026

Karnataka Media Academy ಪತ್ರಿಕೋದ್ಯಮ ಇಂಟರ್ನ್ ಷಿಪ್ ಗೆ ಅರ್ಜಿ ಸಲ್ಲಿಸಲು ಜನವರಿ 20 ಅಂತಿಮ ದಿನಾಂಕ

Date:

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

Karnataka Media Academy ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆಖ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್‌ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್‌ ಮಾಡಿ karnatakamediaacademy@gmail.com ಗೆ ಇ-ಮೇಲ್‌ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...