Monday, February 2, 2026
Monday, February 2, 2026

Yuva Nidhi Scheme ಯುವನಿಧಿ ಗೆ ನೋಂದಣಿ ಪ್ರಕ್ರಿಯೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ

Date:

Yuva Nidhi Scheme ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು
ದಿ: 06-01-2025 ರಿಂದ 20-01-2025 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ.
ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.

ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹೆಯಾನ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ.

Yuva Nidhi Scheme ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮುಂದಿನ ಕಂತು ಪಾವತಿಸಲಾಗುವುದು.
ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಇದರ ಜೊತೆಗೆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಯುವನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಅರ್ಹರು ತಾವು ವಿದ್ಯಾಭ್ಯಾಸ ಮಾಡಿದಂತಹ ಅಥವಾ ಹತ್ತಿರದ ಕಾಲೇಜು/ಪಾಲಿಟೆಕ್ನಿಕ್‌ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರ್ ಹೊಂದಿರತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪ್ರಥಮ ದರ್ಜೆ ಕಾಲೇಜು/ಪಾಲಿಟೆಕ್ನಿಕ್ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂ.ಸಂ: 08182-255293 ನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...