Saturday, December 6, 2025
Saturday, December 6, 2025

CM Siddaramaiah ಕಲಾಕೃತಿ ಕೊಂಡು ಕಲಾವಿದರಿಗೆ ಬೆಂಬಲ ನೀಡಿ- ಸಿದ್ಧರಾಮಯ್ಯ

Date:

CM Siddaramaiah ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ. ಎಂದು ಮುಖ್ಯ ಮಂತ್ತಿ ಸಿದ್ಧರಾಮಯ್ಯ
ಹೇಳಿದ್ದಾರೆ.
22 ನೇ ಚಿತ್ರಕಲಾ ಪರಿಷತ್ ಚಿತ್ರಸಂತೆ ಉದ್ಘಾಟಿಸಿ‌ ಮಾತನಾಡುತ್ತಿದ್ದರು.
ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ದೇಶ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರಕಲಾ ಪರಿಷತ್ತು ಮಾಡುತ್ತಿದೆ. ಚಿತ್ರಸಂತೆ ಆಯೋಜಿಸಿರುವ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆಗಳು.

ಚಿತ್ರಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ. ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರಸಂತೆ ನಡೆಯುವುದು ಹೆಮ್ಮೆಯ ಸಂಗತಿ.

ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ, ಆಸಕ್ತರಿಗೆ ಕೊಳ್ಳುವ ಅವಕಾಶವನ್ನೂ ಚಿತ್ರಸಂತೆ ಒದಗಿಸುತ್ತಿದೆ. ಒಂದು ದಿನಕ್ಕೆ ನಾಲ್ಕು ಲಕ್ಷ ಜನರು ಭೇಟಿ ನೀಡುತ್ತಾರೆ. ಬೆಂಗಳೂರಿಗರಿಗೆ ಇದೊಂದು ಸುವರ್ಣಾವಕಾಶ.

CM Siddaramaiah ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮ ಗಾಂಧಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ಮಾಡುತ್ತಿದೆಎಂದು ಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ. ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತಾಗುತ್ತದೆ.

ಸಂವಿಧಾನದ ಪೀಠಿಕೆಯನ್ನು ಕೂಡ ಇಲ್ಲಿ ಪ್ರದರ್ಶಿಸಲಾಗಿದ್ದು, ಸಮಾಜದ ಎಲ್ಲಾ ವರ್ಗದ ಜನರನ್ನೂ ಪ್ರತಿನಿಧಿಸುತ್ತಿದೆ. ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿಯಾಗಿದೆ. ಚಿತ್ರದ ಮೂಲಕ ಜನಜೀವನ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸಬಹುದಾಗಿದೆ. ಚಿತ್ರಕಲಾ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳು ಪರಿಷತ್ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...