Saturday, December 6, 2025
Saturday, December 6, 2025

Dr. Na D’souza ಹಿರಿಯ ಸಾಹಿತಿ ಡಾ.ನಾ ಡಿಸೋಜ ನಿಧನ

Date:

Dr. Na D’souza ನಾಡಿನ ಹೆಸರಾಂತ ಸಾಹಿತಿ ,‌ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ನಿಧನರಾಗಿದ್ದಾರೆ.
ಸು. 87 ವರ್ಷ ವಯಸ್ಸಿನ ದಿವಂಗತರು ಸರಳ ಮತ್ತು ಸಾಮಾಜಿಕ ಕಳಕಳಿಯ ಬರಹಗಾರರಾಗಿದ್ದರು. ಕಥಾಸಂಕಲನ,
ಕಾದಂಬರಿಗಳನ್ನ ಪ್ರಕಟಿಸಿದ್ದರು. ನಾಡಿನ ಖ್ಯಾತ ಪತ್ರಿಕೆಗಳಲ್ಲಿ ಅವರ ಬರಹಗಳು ಜನಮನ ರಂಜಿಸಿದ್ದವು. ಪರಿಸರ ಪರ ಕಾಳಜಿಯನ್ನೂ ಹೊಂದಿದ್ದ ‘ನಾಡಿ’ ತಮ್ಮದೇ ಓದುಗ ವಲಯನ್ನೂ ಹೊಂದಿದ್ದರು.
ಸಾಗರದ ನಿವಾಸಿಯಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಮಂಗಳೂರಿನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಾಡಿಸೋಜಾ ಅವರ ‌ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಆಘಾತವಾಗಿದೆ.
ಅಕಾಡೆಮಿ ಪ್ರಶಸ್ತಿ ಗೆ ಭಾಜನರಾಗಿದ್ದರು
ಇವರು ಪತ್ರಿಕೆಗಳಿಗೆ ಬರೆದ ಸಣ್ಣ ಕಥೆಗಳ ೯ ಸಂಕಲನಗಳಲ್ಲಿ ಸಂಕಲಿತಗೊಂಡಿದ್ದು, ಸಮಗ್ರ ಕಥೆಗಳು ೨ ಸಂಪುಟಗಳಲ್ಲಿ ಪ್ರಕಟವಾಗಿವೆ.

Dr. Na D’souza ನಾ. ಡಿಸೋಜರವರು
ಲೋಕೋಪಯೋಗಿ ಇಲಾಖೆಯಲ್ಲಿ
ಉದ್ಯೋಗಕ್ಕೆ ಸೇರಿದ್ದರು. ಟೈಪಿಸ್ಟ್ ಮತ್ತು ದ್ವಿತೀಯ ದರ್ಜೆ ಗುಮಾಸ್ತನಾಗಿ. ನಂತರ ಪ್ರಥಮ ದರ್ಜೆ ಗುಮಾಸ್ತರಾಗಿ ಶರಾವತಿ ಯೋಜನೆ ಕಾರ್ಗಲ್, ಮಾಸ್ತಕಟ್ಟೆ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿ ಕಾರ್ಯನಿರ್ವಹಿಸಿ 1995 ರಲ್ಲಿ ನಿವೃತ್ತಿಹೊಂದಿದ್ದರು.

ಸುರೇಶ್ ಹೆಬ್ಲೀಕರ್‌ರವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ‘ದ್ವೀಪ (ಚಲನಚಿತ್ರ)’, ಸಿರಿಗಂಧ ಶ್ರೀನಿವಾಸಮೂರ್ತಿಯವರ ನಿರ್ದೇಶನದಲ್ಲಿ ‘ಬಳುವಳಿ’, ಕೋಡ್ಲು ರಾಮಕೃಷ್ಣರವರ ನಿರ್ದೇಶನದಲ್ಲಿ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನುರವರ ನಿರ್ದೇಶನದಲ್ಲಿ ‘ಆಂತರ್ಯ’ ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ. ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ , ‘ದ್ವೀಪ’ ಚಿತ್ರ ‘ಸ್ವರ್ಣ ಕಮಲ’ ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...