Kannada literature ಹೆಣ್ಣು ಅಲಂಕಾರ ಪ್ರಿಯೆಯಾಗಿದ್ದು, ಶುಭ ಕಾರ್ಯಗಳು ಎದುರಾದ ಸಂದರ್ಭದಲ್ಲಿ ಸೌಂದರ್ಯ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ಜಗಲಿಯ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ ಹೇಳಿದರು.
ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಜಗಲಿ ಹಾಗೂ ನೆಮ್ಮದಿ ಗ್ರೂಪ್ ಆಫ್ ಸರ್ವಿಸ್ ವತಿಯಿಂದ ಹಮ್ಮಿಕೊಂಡ ಸಂಕ್ರಾಂತಿ ಸಂಭ್ರಮ ಹಾಗೂ ಬ್ರೈಡಲ್ ಮೇಕಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರು ಸ್ವಾವಲಂಬಿಯಾಗಿ ಆರ್ಥಿಕವಾಗಿ ಸದೃಢರಾಗಲು ಅನೇಕ ಉದ್ಯೋಗವಕಾಶಗಳಿವೆ. ಇತ್ತೀಚೆಗೆ ಮದುವೆ ಮತ್ತಿತರರ ಶುಭ ಸಂದರ್ಭಗಳಲ್ಲಿ ಅಲಂಕಾರ ಮಾಡುವುದು ಸಹ ವೃತ್ತಿಯಾಗಿ ಪರಿಣಮಿಸಿದೆ. ಕಾರ್ಯಕ್ರಮದ ಸ್ಥಳಕ್ಕೆ ತೆರಳಿ ಅಲಂಕಾರ ಮಾಡುವವರು ಇದ್ದಾರೆ. ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಮಾತ್ರ ಸೀಮಿತ ಎನ್ನುವ ಕಾಲ ಮರೆಯಾಗಿದ್ದು, ಪುರುಷರಿಗೆ ಸಮಾನರಾಗಿ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ.
Kannada literature ಮಹಿಳೆಯರು ಸಹ ವ್ಯಾಪಾರ-ವಹಿವಾಟುಗಳಲ್ಲಿ ತೊಡಗಿ ಸಮಾಜದಲ್ಲಿ ಉತ್ತಮ ಸ್ಥಾನಗಳಿಸುತ್ತಿದ್ದಾರೆ. ಇದಕ್ಕೆ ಹೊಸಪೇಟೆ ಬಡಾವಣೆಯಲ್ಲಿ ನೆಮ್ಮದಿ ಸೀರೆ ಮನೆ ಸ್ಥಾಪಿಸಿ ಸ್ವಯಂ ಉದ್ಯೋಗ ಕಂಡುಕೊಂಡಿರುವ ಅನಿತಾ ನೆಮ್ಮದಿಸುಬ್ಬು ನೆಮ್ಮದೆರು ಸಾಕ್ಷಿ ಎಂದರು.
ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ನೆಮ್ಮದಿ ಗ್ರೂಪ್ ಆಫ್ ಸರ್ವಿಸ್‌ನ ಮುಖ್ಯಸ್ಥೆ ಅನಿತಾ ನೆಮ್ಮದಿ ಸುಬ್ಬು ಮಾತನಾಡಿ, ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೊದಲು ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಇವುಗಳನ್ನು ಮೆಟ್ಟಿನಿಂತು ಉದ್ಯೋಗ ಸ್ಥಾಪಿಸಿದಾಗ ಕುಟುಂಬಕ್ಕೆ ನೆರವಾಗಲು ಸಾಧ್ಯವಾಗುತ್ತದೆ ಎಂದ ಅವರು, ಸಂಸ್ಥೆಯಿಂದ ಮಹಿಳೆಯರಿಗೆ ಹಾಗೂ ಶುಭ ಕಾರ್ಯ ಕೈಗೊಳ್ಳುವವರಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಮಹಿಳೆಯರು ಸ್ಪರ್ಧಾತ್ಮಕ ಯುಗದಲ್ಲಿ ಮುನ್ನುಗ್ಗುತ್ತಿರಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಭಾರತಿ ಭಂಡಾರಿ ಮಾತನಾಡಿದರು, ಕಾರ್ಯಕ್ರಮವನ್ನು ಕಸ್ತೂರಿ ರಾಜು ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಸಾಂಸ್ಕೃತಿಕ ಜಗಲಿಯ ಸದಸ್ಯರಾದ ವಿನಯ ಪ್ರಶಾಂತ್ ಭಾಪಟ್, ಮಾನಸ ರಂಗನಾಥ್, ಅನುಕೃತ, ಶ್ಯಾಮಲಾ, ರತ್ನಮ್ಮ, ಸಾಹಿತಿ ರೇವಣಪ್ಪ ಬಿದರಗೇರಿ ಇತರಿದ್ದರು. ಸಿಂಧೂ ಆದರ್ಶ ಪ್ರಾರ್ಥಿಸಿ, ನಳಿನಾ ಸ್ವಾಗತಿಸಿ, ವಿನುತಾ ವಂದಿಸಿದರು. ರೂಪಾ ಮಧುಕೇಶ್ವರ್ ನಿರ್ವಹಿಸಿದರು.