Swami Vivekananda ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಜ.12 ರ ಬೆಳಿಗ್ಗೆ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ಅಂಗವಾಗಿ ಅಂದು 10 ರಿಂದ 29 ವರ್ಷದೊಳಗಿನವರಿಗೆ ಸ್ವಾಮಿ ವಿವೇಕಾನಂದರ ಕುರಿತಾದ ವೇಷಭೂಷಣ ಸ್ಪರ್ಧೆ ಮತ್ತು 15 ರಿಂದ 29 ವರ್ಷದೊಳಗಿನವರಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
Swami Vivekananda ಆಸಕ್ತರು ಅಂದು ಬೆಳಿಗ್ಗೆ 9.30 ಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಪ್ರಬಂಧ ಸ್ಪರ್ಧೆಗೆ ಸ್ಥಳದಲ್ಲಿ ವಿಷಯ ನೀಡಲಾಗುವುದು. ಕಾರ್ಡ್ಬೋರ್ಡ್ ಮತ್ತು ಪೆನ್ ಸ್ಪರ್ಧಿಗಳೇ ತರಬೇಕು. ವೇಷಭೂಷಣ ಸ್ಪರ್ಧೆಯಲ್ಲಿ ಆಕರ್ಷಣೆ ಮತ್ತು ಸಂಪ್ರದಾಯಕ್ಕೆ ಆದ್ಯತೆ ನೀಡಲಾಗುವುದು. ವಿಜೇತರಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ, ಸ್ಮರಣಿಕೆ, ಭಾಗವಹಿಸುವವರಿಗೆ ಅಭಿನಂದನಾ ಪತ್ರ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.