Thursday, March 19, 2026
Thursday, March 19, 2026

Banashankari Temple ಶಿವಮೊಗ್ಗದಲ್ಲಿ ಶ್ರೀಬನಶಂಕರಿ ಅಮ್ಮನವರ ವೈಭವದ ರಥೋತ್ಸವ

Date:

Banashankari Temple ಶಿವಮೊಗ್ಗ ಬಾಪೂಜಿ ನಗರದಲ್ಲಿ ನೆಲೆಸಿರುವ ಶ್ರೀ ಮಾತಾ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಎರಡು ದಿನಗಳ ಅದ್ದೂರಿಯಾಗಿ ಜರುಗಿತು.
ಶ್ರೀ ಮಾತಾ ಬನಶಂಕರಿ ದೇವಸ್ಥಾನದಲ್ಲಿ ಎರಡು ದಿನಗಳ ಕಾಲ ಅತ್ಯಂತ ವೈಭವದಿಂದ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ನಂದಿ ಧ್ವಜಾರೋಹಣ, ಗಣಪತಿ ಹೋಮ ಪೂಜಾ ಪ್ರಾರಂಭವಾಗಿ ಪುಣ್ಯಾಹ ವಾಚನ, ರಕ್ಷಾ ಬಂಧನ ನಂತರ ಅಭಿಷೇಕ, ಮಹಾಮಂಗಳಾರತಿ ನಡೆಯಿತು. ನಂತರ ಅಮ್ಮನವರ ರಾಜಬೀದಿ ಪಲ್ಲಕ್ಕಿ ಉತ್ಸವವು ಬಾಪೂಜಿನಗರದಿಂದ ಗೋಪಿ ವೃತ್ತದವರೆಗೆ ಡೊಳ್ಳು, ಮಂಗಳವಾದ್ಯ, ಮಹಿಳಾ ಭಜನಾ ತಂಡಗಳೊಂದಿಗೆ ನೆರವೇರಿತು. ಎಲ್ಲ ಭಕ್ತರಿಗೂ ಮಹಾಪ್ರಸಾದ ಅನ್ನಸಂತರ್ಪಣೆ ವಿತರಿಸಲಾಯಿತು.
Banashankari Temple ಶ್ರೀ ಬನಶಂಕರಿ ಮಾತಾ ಅಮ್ಮನವರಿಗೆ ಮರುದಿನ 108 ಲೀಟರ್ ಎಳೆನೀರು, ಕ್ಷೀರಾಭಿಷೇಕ, ದುರ್ಗಾ ಹೋಮ, ಸುಹಾಸಿನಿ ಪೂಜೆ, ಮಹಾ ಮಂಗಳಾರತಿ ನಡೆಯಿತು. ಕಲ್ಲಗಂಗೂರು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಅವರ ಅಮೃತ ಹಸ್ತದಿಂದ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವ ಸಮಯದಲ್ಲಿ ಸಾವಿರಾರು ಭಕ್ತರು ನೆರೆದಿದ್ದರು. ರಥೋತ್ಸವ ಸಮಯದಲ್ಲಿ ಡೊಳ್ಳು, ವೀರಗಾಸೆ, ಭಜನೆ, ಮಂಗಳವಾದ್ಯಗಳೊಂದಿಗೆ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ಮಧ್ಯಾಹ್ನ ಸಾವಿರಾರು ಭಕ್ತರಿಗೆ ಮಹಾಪ್ರಸಾದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ರಾಜಕೀಯ ಮುಖಂಡರು, ಸ್ವಾಮೀಜಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿದ್ದರು. ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ನಗರ ದೇವಾಂಗ ಸಮಾಜದ ಅಧ್ಯಕ್ಷ ಬಿ.ಸತೀಶ್ ಕುಮಾರ್ ಹಾಗೂ ಆಡಳಿತ ಮಂಡಳಿ ಅತ್ಯಂತ ವ್ಯವಸ್ಥಿತವಾಗಿ ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕುಟುಂಬ ವರ್ಗ, ಗಾಯತ್ರಿ ಪೀಠ ಹಂಪಿ ಹೇಮ ಕೂಟ ಟ್ರಸ್ಟ್ ಅಧ್ಯಕ್ಷ ಪಿ.ಆರ್.ಗಿರಿಯಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಮಲೆನಾಡು ದೇವಾಂಗ ಸಮಾಜದ ಆಡಳಿತ ಮಂಡಳಿ, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಟಿ ರಾಜೇಶ್ ಹಾಗೂ ಆಡಳಿತ ಮಂಡಳಿ, ಬನಶಂಕರಿ ಮಹಿಳಾ ಸಮಾಜ ಅಧ್ಯಕ್ಷೆ ಜಯಮ್ಮ ಹಾಗೂ ಆಡಳಿತ ಮಂಡಳಿ, ಶ್ರೀ ದೇವರ ದಾಸಿಮಯ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಹಾಗೂ ಆಡಳಿತ ಮಂಡಳಿಯವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...