Kuvempu University ಕುವೆಂಪು ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನಶಾಸ್ತ್ರ ವಿಷಯದಲ್ಲಿ ಸತೀಶ್ ಹೆಚ್ ಸಿ ಇವರು ಪಿಹೆಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.
ಇವರು ಸಿಂಥೆಸಿಸ್ ಕ್ಯಾರೆಕ್ಟರೈಜೇಷನ್ ಆಫ್ ಮೆಟಲ್ ನ್ಯಾನೋ ಪಾರ್ಟಿಕಲ್ಸ್: ಎಲೆಕ್ಟ್ರೋಕೆಮಿಕಲ್ಸ್ ಆಂಡ್ ಡೈ ಡಿಗ್ರಡೆಶನ್ ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಅನಿತಾ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.
Kuvempu University ಇವರು ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಚಂದ್ರಪ್ಪ ಮತ್ತು ಕೆಂಚಮ್ಮ ದಂಪತಿಗಳ ಪುತ್ರರಾಗಿದ್ದು ಪ್ರಸ್ತುತ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜ.22 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪ್ರಮಾಣ ಪತ್ರ ನೀಡಲಿದ್ದಾರೆ.