Thursday, June 18, 2026
Thursday, June 18, 2026

CM Siddharamaiah ಬಿಜೆಪಿ‌ ನೇತೃತ್ವದ ಕೇಂದ್ರ ಸರ್ಕಾರವು ಭದ್ರಾ ಯೋಜನೆಗೆ ₹5,300 ಕೋಟಿ ಬಿಡುಗಡೆ ಮಾಡಲಿ- ಸಿದ್ಧರಾಮಯ್ಯ

Date:

CM Siddharamaiah ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1,274 ಕೋಟಿ ರೂಪಾಯಿ ವೆಚ್ಚದಲ್ಲಿ ಇಲ್ಲಿಗೆ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ. ಈ ಯೋಜನೆ ಜಾರಿಯಾದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸಮಾರಂಭದಲ್ಲಿ ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ, ಬಳಿಕ ವಂಚಿಸಿದರು. ಈ ಯೋಜನೆಗೆ 5,300 ಕೋಟಿ ರೂಪಾಯಿ ಕೊಡುವುದಾಗಿ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಆದರೆ ನಯಾಪೈಸೆ ಬಿಡುಗಡೆಗೊಳಿಸದೆ ಈ ಭಾಗದ ಜನ ಸಮುದಾಯಕ್ಕೆ ಗೋಂವಿಂದ ಕಾರಜೋಳ ಮತ್ತು ಕೇಂದ್ರ ಸರ್ಕಾರ ವಂಚಿಸಿದೆ ಎಂದರು.

ಇನ್ನಾದರೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿ ಕೊಟ್ಟ ಮಾತಿನಂತೆ 5,300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿಕೊಡಿ. ಬಿಜೆಪಿ ಕೊಟ್ಟ ಮಾತಿಗೆ ವಂಚಿಸುತ್ತದೆ. ನಾವು ಕೊಟ್ಟ ಮಾತು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ.
ಚುನಾವಣೆ ವೇಳೆ ಕೊಟ್ಟ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಸೇರಿ ಎಲ್ಲಾ ಜನ ಸಮುದಾಯಗಳ ನಂಬಿಕೆ ಉಳಿಸಿಕೊಂಡಿದ್ದೇವೆ. ಇದೇ ನಮಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದು ತಿಳಿಸಿದರು.

CM Siddharamaiah ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿದ್ದು ಸರ್ಕಾರದಿಂದ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ್ದೇವೆ. 115 ವರ್ಷಗಳ ಇತಿಹಾಸ ಇರುವ, ರಾಜ್ಯದಲ್ಲಿ ನಿರ್ಮಾಣ ಆದ ಮೊದಲ ಜಲಾಶಯ ಇದಾಗಿದ್ದು ಮೂರನೇ ಬಾರಿ ಕೋಡಿ ಬಿದ್ದಿದೆ.ಅಂದಿನ‌ ಮಹಾರಾಣಿ ಅಮ್ಮಣ್ಣಿ ತಾಯಿಯವರು ತಮ್ಮ ಒಡವೆಗಳನ್ನು ಮಾರಿ 45 ಲಕ್ಷ ರೂಪಾಯಿ ಖರ್ಚು ಮಾಡಿ ಈ ಜಲಾಶಯ ನಿರ್ಮಿಸಿದ್ದಾರೆ. ಇದು 30 ಸಾವಿರ ಎಕರೆ ಕೃಷಿ ಭೂಮಿಗೆ ನೀರು ಒದಗಿಸುತ್ತಿದೆ. ಹೀಗಾಗಿ ರಾಣಿ ಅಮ್ಮಣ್ಣಿಯವರನ್ನು ನಾವು ಸ್ಮರಿಸುತ್ತೇವೆ, ಧನ್ಯವಾದ ಅರ್ಪಿಸುತ್ತೇವೆ ಎಂದು ಹೇಳಿದರು.

    LEAVE A REPLY

    Please enter your comment!
    Please enter your name here

    NEWSLETTER - Sign Up for Free E-News

    Popular

    More like this
    Related

    Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

    Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

    K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

    K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

    ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

    ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...