Republic Day ಜ.26 ರ ಗಣರಾಜ್ಯೋತ್ಸವದಂದು ಬೆಳಿಗ್ಗೆ 10.30 ಕ್ಕೆ ನಗರದ ಅಲ್ಲಮಪ್ರಭು ಉದ್ಯಾನ(ಫ್ರೀಡಂ ಪಾರ್ಕ್)ದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸಂವಿಧಾನ ಪೀಠಿಕೆ ಪ್ರತಿಷ್ಟಾಪನೆ ಲೋಕಾರ್ಪಣೆಗೊಳಿಸುವರು.
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ಸವಿನೆನಪಿಗಾಗಿ ಪ್ರತಿ ವರ್ಷ ನ.26 ರಂದು ಸಂವಿಧಾನ ದಿನವನ್ನಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅದರಂತೆ ನಾಗರಿಕರಲ್ಲಿ ಸಂವಿಧಾನದ ಮೌಲ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಪ್ರಚಾರಾಂದೋಲನ ಕೈಗೊಳ್ಳುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಪ್ರಸಿದ್ದ ಉದ್ಯಾನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯ 10*6 ಅಡಿ ಅಳತೆಯ ಸಂವಿಧಾನ ಪೀಠಿಕೆಯನ್ನು ಉದ್ಘಾಟಿಸಿ ಪ್ರಚಾರಾಂದೋಲನ ಕೈಗೊಳ್ಳಲು ನಿರ್ದೇಶನ ನೀಡಲಾಗಿತ್ತು.
ಅದರನ್ವಯ 2024 ರ ನ.26 ರಂದು ಅಲ್ಲಮಪ್ರಭು ಉದ್ಯಾನದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಪೀಠಿಕೆ ಪ್ರತಿಷ್ಟಾಪಿಸಲು ಗುದ್ದಲಿ ಪೂಜೆ ನೆರವೇರಿಸಿರುತ್ತಾರೆ.
Republic Day ಸಂವಿಧಾನ ಪೀಠಿಕೆ ಪ್ರತಿಷ್ಟಾಪನೆ ಕಾರ್ಯ ಪೂರ್ಣಗೊಂಡಿದ್ದು ಜ.26 ರಂದು ಜಿಲ್ಲಾ ಉಸ್ತುವಾರಿ ಸಚಿವರು, ಚಿನಾಯಿತು ಪ್ರತಿನಿಧಿಗಳು ಲೋಕಾರ್ಪಣೆಗೊಳಿಸಲಿದ್ದು ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ದಲಿತ ಸಂಘಟನೆ ಮುಖಂಡರು, ವಿವಿಧ ಸಂಘಟನೆಯ ಮುಖಂಡರು ಹಾಗೂ ನಾಗರೀಕರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲೇಶಪ್ಪ ಕೋರಿದ್ದಾರೆ