Bhadra Dam 2024-25 ನೇ ಸಾಲಿನ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ದಿ: 05-02-2025 ರಿಂದ 11-02-2025 ರವರೆಗೆ 5800 ಕ್ಯೂಸೆಕ್ಸ್ ನೀರನ್ನು ಹರಿಸಲು ಆದೇಶಿಸಲಾಗಿರುತ್ತದೆ.
Bhadra Dam ಪ್ರಾದೇಶಿಕ ಆಯುಕ್ತರ ಆದೇಶದನ್ವಯ ದಿ: 05-02-2025 ರ ರಾತ್ರಿ 100 ಕ್ಯೂಸೆಕ್ಸ್ ಮತ್ತು ದಿ: 06-02-2025 ರಿಂದ 11-02-2025 ರವರೆಗೆ ಪ್ರತಿದಿನ 800 ಕ್ಯೂಸೆಕ್ಸ್ನಂತೆ ಒಟ್ಟು 5800 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು.
ಮೇಲೆ ತಿಳಿಸಿದ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬAಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್ ರವಿಚಂದ್ರ ತಿಳಿಸಿದ್ದಾರೆ.
Bhadra Dam ಮೈಲಾರಲಿಂಗೇಶ್ವರ ಜಾತ್ರೆಗೆ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ. ಸಾರ್ವಜನಿಕರಿಗೆ ತಿಳುವಳಿಕೆ ಪ್ರಕಟಣೆ
Date:
