Bengaluru Metropolitan Transport Corporation ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಕೆನರಾ ಬ್ಯಾಂಕ್ ನೊಂದಿಗೆ ರೂ. 1.5 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆ ಮತ್ತು ಸಂಸ್ಥೆಯ ಸೇವೆಯಲ್ಲಿರುವಾಗ ಅಪಘಾತದಲ್ಲಿ ಮೃತಪಟ್ಟಿರುವ ಸಿಬ್ಬಂದಿಗಳ ನಾಮನಿರ್ದೇಶಿತರಿಗೆ ರೂ. 1 ಕೋಟಿ ಅಪಘಾತ ವಿಮಾ ಪರಿಹಾರ ಮೊತ್ತದ ಚೆಕ್ ಮತ್ತು ಸ್ವಾಭಾವಿಕವಾಗಿ ಮೃತಪಟ್ಟಿರುವ ಸಿಬ್ಬಂದಿಗಳ ನಾಮನಿರ್ದೇಶಿತರಿಗೆ ಸಂಸ್ಥೆಯ ಗುಂಪು ವಿಮಾ ಯೋಜನೆಯ ರೂ. 10 ಲಕ್ಷಗಳ ಚೆಕ್ ಅನ್ನು ಶ್ರೀ ರಾಮಲಿಂಗಾರೆಡ್ಡಿ, ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ವಿತರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
• ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರುಗಳ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸುವ ಸದುದ್ದೇಶದಿಂದ, ಕೆನರಾ ಬ್ಯಾಂಕ್ನೊಂದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಈ ಒಡಂಬಡಿಕೆಯನ್ವಯ ಬ್ಯಾಂಕ್ ನಲ್ಲಿ ವೇತನ ಖಾತೆ ಹೊಂದಿರುವ ಅಧಿಕಾರಿ/ನೌಕರರು ಅಪಘಾತ (ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತ ಸೇರಿದಂತೆ) ಮೃತಪಟ್ಟಲ್ಲಿ, ಅವರ ನಾಮನಿರ್ದೇಶಿತರಿಗೆ ರೂ.1.00 ಕೋಟಿ ವಿಮಾ ಪರಿಹಾರ ಮೊತ್ತವನ್ನು ಪಾವತಿಸುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ, ಸಂಸ್ಥೆಯು 50 ಲಕ್ಷ ರೂಪಾಯಿಗಳನ್ನು ಸಹ ನೀಡುತ್ತಿದ್ದು, ಒಟ್ಟು 1.50 ಲಕ್ಷ ರೂಪಾಯಿಗಳನ್ನು ಮೃತ ಸಿಬ್ಬಂದಿಗಳ ಕುಟುಂಬಕ್ಕೆ ನೀಡಲಾಗುವುದು.
• ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಜಾರಿಯಲ್ಲಿದ್ದ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಿ, ಅಧಿಕಾರಿ/ನೌಕರರ ವಂತಿಗೆ ರೂ.350/- ಮತ್ತು ಸಂಸ್ಥೆಯ ವಂತಿಗೆ ರೂ.150/- ಒಟ್ಟು ರೂ.500/-ಗಳ ವಂತಿಗೆಯೊಂದಿಗೆ ಅಪಘಾತದಿಂದ (ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತ ಸೇರಿದಂತೆ) ಮೃತಪಟ್ಟಲ್ಲಿ ರೂ.50.00 ಲಕ್ಷ ಮತ್ತು ಸ್ವಾಭಾವಿಕ ಹಾಗೂ ಇನ್ನಿತರೆ ಕಾರಣಗಳಿಂದ ಮೃತಪಟ್ಟಲ್ಲಿ, ರೂ.10.00 ಲಕ್ಷ ವಿಮಾ ಪರಿಹಾರ ಮೊತ್ತವನ್ನು ಪಾವತಿಸುವ ಯೋಜನೆಯನ್ನು ದಿನಾಂಕ:19.02.2024 ರಿಂದ ಜಾರಿಗೆ ತರಲಾಗಿರುತ್ತದೆ.
• ದಿನಾಂಕ:19.02.2024 ರಿಂದ ಜನವರಿ-2025 ರವರೆಗೆ 86 ನೌಕರರುಗಳು ಮೃತಪಟ್ಟಿದ್ದು, ಅದರಲ್ಲಿ ಸ್ವಾಭಾವಿಕ ಹಾಗೂ ಇನ್ನಿತರೆ ಕಾರಣಗಳಿಂದ ಒಟ್ಟು 77 ನೌಕರರು ಮೃತಪಟ್ಟಿದ್ದು, ಅದರಲ್ಲಿ 46 ಮೃತ ನೌಕರರುಗಳ ನಾಮನಿರ್ದೇಶಿತರಿಗೆ ಸಂಸ್ಥೆಯ ಗುಂಪು ವಿಮಾ ಯೋಜನೆಯಡಿಯಲ್ಲಿ ತಲಾ ರೂ.10.00 ಲಕ್ಷದಂತೆ ಒಟ್ಟು ರೂ.4,60,00,000/- ಗಳನ್ನು ಪಾವತಿಸಲಾಗಿರುತ್ತದೆ. ಉಳಿದ 31 ಪ್ರಕರಣಗಳು ದಾಖಲಾತಿ ಪರಿಶೀಲನಾ ಹಂತದಲ್ಲಿರುತ್ತದೆ.
Bengaluru Metropolitan Transport Corporation 09 ನೌಕರರು ಅಪಘಾತದಿಂದ ಮೃತಪಟ್ಟಿದ್ದು, ಅದರಲ್ಲಿ 04 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.50.00 ಲಕ್ಷದಂತೆ ರೂ.2,00,00,000/-ಗಳ ವಿಮಾ ಪರಿಹಾರ ಮೊತ್ತವನ್ನು ದಿನಾಂಕ:01.02.2025 ರಂದು ಪಾವತಿಸಲಾಗುತ್ತಿದೆ. ಉಳಿದ ಪ್ರಕರಣಗಳ ದಾಖಲಾತಿಗಳ ಪರಿಶೀಲನಾ ಹಂತದಲ್ಲಿರುತ್ತದೆ.
• ಸಂಸ್ಥೆಯ ಗುಂಪು ವಿಮಾ ಯೋಜನೆಯಡಿಯಲ್ಲಿ ತಲಾ ರೂ.10.00 ಲಕ್ಷದಂತೆ ಈ ಕೆಳಕಂಡ ಮೃತಾವಲಂಬಿತರಿಗೆ ದಿನಾಂಕ:01.02.2025 ರಂದು ರೂ.10 ಲಕ್ಷದ ಚೆಕ್ ನೀಡಲಾಗುತ್ತಿದೆ.
ಶ್ರೀ ಬನ್ನಪ್ಪ, ಸಂಚಾರ ನಿಯಂತ್ರಕರು, ಘಟಕ-07,
ಶ್ರೀ ಕೆ.ವಿ.ಶ್ರೀನಿವಾಸ, ಕುಶಲಕರ್ಮಿ-3564, ಘಟಕ-17
ಶ್ರೀ ಗೋಪಾಲಯ್ಯ ಎಸ್, ಚಾಲಕ-10460, ಘಟಕ-41
ವರದರಾಜ.ಎಸ್, ಚಾಲಕ-ಕಂ-ನಿರ್ವಾಹಕ-31, ಘಟಕ-17
ಹರ್ಷ ರಾವ್.ಸಿ, ಕಿರಿಯ ಸಹಾಯಕ, ಘಟಕ-02
• ಸದರಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್.ಆರ್, ಭಾ.ಆ.ಸೇ, ಶ್ರೀಮತಿ ಶಿಲ್ಪಾ.ಎಂ, ಭಾ.ಆ.ಸೇ, ನಿರ್ದೇಶಕರು (ಮಾ.ತಂ), ಶ್ರೀ ಮಹೇಶ್ ಪೈ, ಪ್ರಧಾನ ವ್ಯವಸ್ಥಾಪಕರು ಮತ್ತು ಕೆನರಾ ಬ್ಯಾಂಕಿನ ಸಿಬ್ಬಂದಿಗಳು ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.