Tuesday, August 25, 2026
Tuesday, August 25, 2026

B.Y.Vijayendra ನಾನೇ ಮತ್ತೆ ರಾಜ್ಯ ಬಿಜೆಪಿ ಅಧ್ಯಕ್ಷ – ವಿಜಯೇಂದ್ರ ವಿಶ್ವಾಸ

Date:

B.Y.Vijayendra ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ.ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ.ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ.
ವ್ಯವಸ್ಥಿತವಾಗಿ ಸಂಘಟನೆ ಚುನಾವಣೆ ನಡೆಯುತ್ತದೆ ಎಂದರೆ ಅದು ಬಿಜೆಪಿಲಿ ಮಾತ್ರ ಎಂದಿರು.

ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ.ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ.ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ.
ಕಳೆದ ಒಂದು ವರ್ಷದಿಂದ ಭ್ರಷ್ಟ, ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದೆ.
ನಾನು ಯಾವ ರೀತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೆನೆ ಎಂಬುದು ಕಾರ್ಯಕರ್ತರಿಗೆ, ಪಕ್ಷದ ಮುಖಂಡರಿಗೆ ಗೊತ್ತಿದೆ ಎಂದು ಹೇಳಿದರು.

ನಾನು ರಾಜ್ಯದ ಬಿಜೆಪಿ ಅಧ್ಯಕ್ಷನಾಗುತ್ತೆನೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ.
ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು.
ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ.
ಎಲ್ಲದೂ ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ.
ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

B.Y.Vijayendra ಯತ್ನಾಳ್ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ.
ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ.ಅದಾದನಂತರ ಎಲ್ಲವೂ ಸರಿಯಾಗಲಿದೆ.
ಕಳೆದ ವರ್ಷದಿಂದ ನಾನು ಬಹಿರಂಗ ಹೇಳಿಕೆ ಕೊಟ್ಟಿಲ್ಲ.
ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ.

ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ.ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ.
ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ.8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ ಬಳಿಕ ಎಲ್ಲಾ ಸಮಸ್ಯೆಗಳು ಬಗೆ ಹರಿಯಲಿದೆ.ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...