Monday, May 4, 2026
Monday, May 4, 2026

Shivaganga Yoga Centre ಸೂರ್ಯ ನಮಸ್ಕಾರದಿಂದ ಆಯುಸ್ಸು ವೃದ್ಧಿ- ಸಿ.ವಿ. ರುದ್ರಾರಾಧ್ಯ

Date:

Shivaganga Yoga Centre ಸೂರ್ಯ ನಮಸ್ಕಾರದಿಂದ ಸರ್ವ ರೋಗವು ಗುಣವಾಗುವುದರ ಜೊತೆಗೆ ನಮ್ಮ ಆಯಸ್ಸು ವೃದ್ಧಿಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಹೇಳಿದರು.
ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಏರ್ಪಡಿಸಿದ್ದ ರಥಸಪ್ತಮಿ ಕಾರ್ಯಕ್ರಮದಲ್ಲಿ ಮಾತನಾಡಿ, ಸೂರ್ಯ ನಮಸ್ಕಾರ ಆಸನಗಳ ಒಂದು ರಾಜ. ದೇಹದಲ್ಲಿ ಎಲ್ಲಾ ಅಂಗಾಂಗಗಳಲ್ಲಿ ರಕ್ತ ಚೆನ್ನಾಗಿ ಸಂಚಾರ ಆಗುವುದರಿಂದ ದೇಹದಲ್ಲಿ ಯಾವುದೇ ಕಾಯಿಲೆಗಳು ನಮಗೆ ಬರುವುದಿಲ್ಲ. ನಿರಂತರವಾಗಿ ಅಭ್ಯಾಸ ಮಾಡುವುದರಿಂದ ನಾವುಗಳು ಸದಾ ಲವಲವಿಕೆ ಹಾಗೂ ಆರೋಗ್ಯವಂತರಾಗಿರುತ್ತೇವೆ ಎಂದು ತಿಳಿಸಿದರು.
ಸಕಲ ಜೀವರಾಶಿಗೂ ಸೂರ್ಯನು ಬೇಕೇ ಬೇಕು. ಸೂರ್ಯನಿಲ್ಲದಿದ್ದರೆ ಬದುಕೇ ಇಲ್ಲ. ಸೂರ್ಯದೇವನನ್ನು ಪ್ರಾರ್ಥಿಸಿ ಶಕ್ತಿ ಅನುಸಾರ ನಮಸ್ಕಾರಗಳನ್ನು ಮಾಡಿದರೆ ಆರೋಗ್ಯ ವೃದ್ಧಿಯಾಗುವುದು ಎಂದರು.
Shivaganga Yoga Centre ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ರಥಸಪ್ತಮಿ ಕಾರ್ಯಕ್ರಮವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಯಿತು. 15 ದಿನ ಸೂರ್ಯ ನಮಸ್ಕಾರವನ್ನು ಅಭ್ಯಾಸ ಮಾಡಿರುವ ಎಲ್ಲರಿಗೂ ಸೂರ್ಯದೇವ ಒಳಿತು ಮಾಡಲಿ ಎಂದು ಆಶಿಸಿದರು.
ಬೆಳಗ್ಗೆ 5.30ಕ್ಕೆ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಿ 6 ಗಂಟೆಗೆ ಸರಿಯಾಗಿ ಅಖಂಡ ಸೂರ್ಯ ನಮಸ್ಕಾರ ಪ್ರಾರಂಭವಾಯಿತು. ಯೋಗ ಗುರು ಡಾ. ಪದ್ಮನಾಭ ಅಡಿಗ ಅವರು ರಥಸಪ್ತಮಿ ಹಾಗೂ ಸೂರ್ಯ ನಮಸ್ಕಾರದ ಪ್ರಾಮುಖ್ಯತೆ ಕುರಿತು ವಿವರಿಸಿದರು.
ಶಿವಗಂಗಾ ಯೋಗ ಕೇಂದ್ರದ ಎಲ್ಲಾ ಶಾಖೆಗಳಿಂದ ಸಾವಿರಕ್ಕೂ ಹೆಚ್ಚು ಶಿಕ್ಷಣಾರ್ಥಿಗಳು ರಥಸಪ್ತಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೂರ್ಯ ನಮಸ್ಕಾರ ಮಾಡಿದರು. 300ಕ್ಕೂ ಹೆಚ್ಚು ಶಿಬಿರಾರ್ಥಿಗಳು 12 ಮಂಡಲ ಸೂರ್ಯ ನಮಸ್ಕಾರ ಮಾಡಿ ವಿಶೇಷ ಸಾಧನೆ ಮಾಡಿದರು.
ಕಾರ್ಯಕ್ರಮದಲ್ಲಿ ಚಂದ್ರಶೇಖರಯ್ಯ, ಓಂಕಾರ್, ಡಾ. ನಾಗರಾಜ ಪರಿಸರ, ಜಿ.ವಿಜಯಕುಮಾರ್, ಜಗದೀಶ್, ಲವಕುಮಾರ, ಚಂದ್ರಶೇಖರಯ್ಯ, ಹರೀಶ್, ನೀಲಕಂಠ ರಾವ್ ಹಾಗೂ ಎಲ್ಲ ಶಾಖೆಯ ಯೋಗ ಶಿಕ್ಷಕರಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...