Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.
ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
Madhu Bangarappa ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.