B.Y.Vijayendra ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ.
B.Y.Vijayendra ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.