Breaking News ಶಿವಮೊಗ್ಗ- ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು ತಲುಪುವ ರಾಷ್ಟ್ರೀಯ ಹೆದ್ದಾರಿಯು ಹೊಸದಾಗಿ ನಿರ್ಮಾಣವಾಗುತ್ತಿದೆ. ಹೊಳೆಹೊನ್ನೂರು ಹೊಸ ಸೇತುವೆ ಮೂಲಕ ಬೈಪಾಸ್ ರಸ್ತೆ ಯಲ್ಲಿ ನಿನ್ನೆ ಸಂಜೆಯಿಂದ ಪ್ರಾಯೋಗಿಕವಾಗಿ ಸಂಚಾರಕ್ಕೆ ಬಿಡಲಾಗಿತ್ತು. ಆದರೆ, ಇಂದು ಬೆಳಗ್ಗೆ ಸ್ಥಳೀಯ ನಿವಾಸಿ ಪುಟ್ಟಪ್ಪ (52) ಕ್ಯಾಂಟರ್ ವಾಹನದ ಢಿಕ್ಕಿಗೆ ಬಲಿಯಾದ ದಾರುಣ ಘಟನೆ ವರದಿಯಾಗಿದೆ.
ಈ ಸಂಬಂಧ ಹೊಳೆಹೊನ್ನೂರು, ಎಮ್ಮೆಹಟ್ಟಿ, ಅಗಸನಹಳ್ಳಿ ಸೇರಿದಂತೆ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಡರ್‌ಪಾಸ್ ನಿರ್ಮಾಣದ ಸ್ಥಳೀಯರ ಒತ್ತಾಯವನ್ನು ನಿರ್ಲಕ್ಷಿಸಿದ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮತ್ತು ಸ್ಥಳೀಯ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಂಗಳವಾರ ಬೆಳಿಗ್ಗೆ, ಟಿವಿಎಸ್ ಎಕ್ಸೆಲ್ ಬೈಕ್‌ನಲ್ಲಿ ಅಗಸನಹಳ್ಳಿಯಿಂದ ಹೊಳೆಹೊನ್ನೂರಿಗೆ ಬರುತ್ತಿದ್ದ ಪುಟ್ಟಪ್ಪ ಎಂಬವರನ್ನು ಕ್ಯಾಂಟರ್ ಡಿಕ್ಕಿಹೊಡೆದು, ಸ್ಥಳದಲ್ಲೇ ಸಾವಿಗೀಡು ಮಾಡಿದೆ.
ಈ ದುರಂತದ ಬಳಿಕ ಸ್ಥಳೀಯರು ಸಾರ್ವಜನಿಕ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಮನವಿಗೆ ಸ್ಪಂದಿಸದೆ ಪ್ರಾಯೋಗಿಕವಾಗಿ ಬೈಪಾಸ್ ರಸ್ತೆ ತೆರೆಯುವುದೇ ಈ ಅಪಘಾತದ ಕಾರಣ!ಎಂದು ಆರೋಪಿಸಿದ್ದಾರೆ. ಇದುವರೆಗೆ ಯಾವುದೇ ಅಧಿಕಾರಿಯೂ ಸ್ಥಳಕ್ಕೆ ಆಗಮಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Breaking News ಅಂಡರ್‌ಪಾಸ್ ನಿರ್ಮಾಣದ ಬೇಡಿಕೆ ನಿರ್ಲಕ್ಷ್ಯವೇ ಸಾವಿಗೆ ಕಾರಣ?
ಸ್ಥಳೀಯರು ಈಗಾಗಲೇ ಸಂಸದ, ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿ ಎಮ್ಮೆಹಟ್ಟಿ ಮಾರ್ಗದಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿದ್ದರು ಆದರೆ, ಅದನ್ನು ನಿರ್ಲಕ್ಷಿಸಿ ಪ್ರಾಯೋಗಿಕವಾಗಿ ಬೈಪಾಸ್ ರಸ್ತೆ ಸಂಚಾರಕ್ಕೆ ಅವಕಾಶ ನೀಡಿದ ಪರಿಣಾಮ ಈ ದುರಂತ ಸಂಭವಿಸಿದೆ
ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯು ತೀವ್ರ ರೂಪ ಪಡೆದುಕೊಂಡಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಕ್ರಮಗಳನ್ನೂ ಕೈಗೊಳ್ಳುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.