Zameer Ahmed In Shimoga ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್‌ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000ಮನೆಗಳ ಪೈಕಿ 652ಮನೆಗಳನ್ನು ಇಂದು ರಾಜ್ಯ ವಸತಿ, ವಕ್ಫ್‌ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್‌ಅವರು ಫಲಾನುಭವಿಗಳಿಗೆ ಮನೆಯ ಕೀಯನ್ನು ಹಸ್ತಾಂತರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಗೋವಿಂದಾಪುರದಲ್ಲಿ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈ ಹಿಂದೆ ಸುಮಾರು 624 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಲಾಗಿದೆ ಎಂದ ಅವರು ಈಗಾಗಲೇ ವಿತರಿಸಲಾದ ಮನೆಗಳ ಫಲಾನುಭವಿಗಳು ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ವಿಳಂಬದಿಂದಾಗಿ ಪ್ರತಿ ಮನೆಯ ವೆಚ್ಚದ ಜೊತೆಗೆ ಹೆಚ್ಚುವರಿಯಾಗಿ ರೂ.2.00ಲಕ್ಷಗಳನ್ನು ಪಾವತಿಸಿರುವುದನ್ನು ಗಮನಿಸಲಾಗಿದ್ದು, ಈ ಎಲ್ಲಾ ಫಲಾನುಭವಿಗಳಿಗೆ ತಾವು ಪಾವತಿಸಿರುವ ಹೆಚ್ಚುವರಿ ಮೊತ್ತವನ್ನು ಮುಂದಿನ ಒಂದೂವರೆ ತಿಂಗಳೊಳಗಾಗಿ ಸರ್ಕಾರದ ವತಿಯಿಂದ ಹಿಂದಿರುಗಿಸಲಾಗುವುದು ಎಂದರು.
ಪ್ರಸ್ತುತ ಸದರಿ ಬಡಾವಣೆಗೆ ತಾತ್ಕಾಲಿಕ ವಿದ್ಯುತ್‌ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸುಮಾರು 12ಕೋಟಿ ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ಸಂಪರ್ಕ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದ ಅವರು, ರಾಜ್ಯದಲ್ಲಿ ಇದೇ ಯೋಜನೆಯಡಿ ನಿರ್ಮಾಣಗೊಳ್ಳಬೇಕಾಗಿದ್ದ 47,860ಮನೆಗಳ ಕಾಮಗಾರಿ ಅಪೂರ್ಣಗೊಂಡಿದ್ದು, ಫಲಾನುಭವಿಗಳು ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತ2700ಕೋಟಿ ಬಾಕಿ ಇದೆ. ನಗರದ ಕೊಳಚೆ ನಿರ್ಮೂಲನೆ ಯೋಜನೆಯಡಿ ರಾಜ್ಯದಲ್ಲಿ 180253ಮನೆಗಳು ಮಂಜೂರಾಗಿದ್ದು, ಸದರಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಂದ ಸುಮಾರು 7400ಕೋಟಿ ಮೊತ್ತ ಸರ್ಕಾರಕ್ಕೆ ಬರಬೇಕಾಗಿದೆ. ಅಲ್ಲದೇ ರಾಜೀವ್‌ಗಾಂಧಿ ವಸತಿ ಯೋಜನೆಯಡಿ 7863ಮನೆಗಳ ಫಲಾನುಭವಿಗಳಿಂದ ಸರ್ಕಾರಕ್ಕೆ 2100ಕೋಟಿ ಮೊತ್ತ ಸಂದಾಯವಾಗಿದ್ದು, ಒಟ್ಟಾರೆಯಾಗಿ 9500ಕೋಟಿಗೂ ಅಧಿಕ ಮೊತ್ತ ಸರ್ಕಾರಕ್ಕೆ ಪಾವತಿಯಾಗಬೇಕಾಗಿದೆ. ವಾಸ್ತವದಲ್ಲಿ ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಕಡುಬಡವರಾಗಿದ್ದು, ಹಣ ಹೊಂದಿಸುವುದು ಕಷ್ಟಕರವೆಂಬುದನ್ನು ಮನಗಂಡು ಪಾವತಿಸಬೇಕಾದ ಮೊತ್ತಕ್ಕೆ ರಿಯಾಯಿತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿಸಿಕೊಂಡಿರುವುದಾಗಿ ಅವರು ತಿಳಿಸಿದರು.
ಕಳೆದ ಸಾಲಿನಲ್ಲಿ 36,789 ಫಲಾನುಭವಿಗಳಿಗೆ 500ಕೋಟಿ ರೂ.ಗಳ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಿಕೊಡಲು ಉದ್ದೇಶಿಸಲಾಗಿದ್ದು, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ, ಅನುಮೋದನೆ ಪಡೆದು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದ ಅವರು, ರಾಜ್ಯದಲ್ಲಿ ರಾಜೀವ್‌ಗಾಂಧಿ ವಸತಿ ಯೋಜನೆ ಮತ್ತು ಕೊಳಚೆ ನಿರ್ಮೂಲನೆ ಯೋಜನೆಯಡಿ ಸುಮಾರು 2,30,000 ಮನೆಗಳನ್ನು ಹಂತಹಂತವಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ ಹುಬ್ಬಳ್ಳಿಯಲ್ಲಿ 4100ಮನೆಗಳ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
Zameer Ahmed In Shimoga ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 2016ರಲ್ಲಿ 2023ಎಕರೆ ಭೂಪ್ರದೇಶದಲ್ಲಿ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡುವ ಬೃಹತ್‌ಯೋಜನೆಯನ್ನು ರೂಪಿಸಿ, ಬೂಮಿಯನ್ನು ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಲಾಗಿತ್ತು. ನಂತರದ ಸರ್ಕಾರಗಳ ಅವಧಿಯಲ್ಲಿ ಈ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗದಿರುವುದನ್ನು ಗಮನಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಅಂದು ಪ್ರತಿ ಮನೆಗೆ ನಿಗಧಿಪಡಿಸಲಾದ್ದ ರೂ.6.00ಲಕ್ಷ ಗಳ ವೆಚ್ಚದ ಮೊತ್ತವಲ್ಲದೇ ಹೆಚ್ಚುವರಿಯಾಗಿ 3.50ಲಕ್ಷ ರೂ.ಗಳನ್ನು ಪಾವತಿಸಬೇಕಾಗಿದೆ. ಇದು ಜನಸಾಮಾನ್ಯರಿಗೆ ಕಷ್ಟಕರವೆಂಬುದನ್ನು ಮನವರಿಕೆ ಮಾಡಿಕೊಂಡ ಮುಖ್ಯಮಂತ್ರಿಗಳು ಪ್ರತಿ ಫಲಾನುಭವಿಗಳಿಗೆ ರೂ.1.00ಲಕ್ಷ ಮೊತ್ತದ ವಿನಾಯಿತಿ ನೀಡಲು ಉದ್ದೇಶಿಸಿರುವುದಾಗಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕೊಳಚೆ ಪ್ರದೇಶ ನಿರ್ಮೂಲನೆ ಯೋಜನೆಯಡಿ 2725ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು ಮುಂದಿನ ತಿಂಗಳ ಮಾಸಾಂತ್ಯದಲ್ಲಿ 1545ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಬಸವ, ಅಂಬೇಡ್ಕರ್‌ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸರ್ಕಾರ ನಿಗಧಿಪಡಿಸಿದ್ದ ಸಹಾಯಧನವನ್ನು 1.20ಲಕ್ಷ ರೂ.ಗಳಿಂದ 3.50ಲಕ್ಷ ರೂ.ಗಳಿಗೆ ಹೆಚ್ಚಿಸಲು ಪ್ರಸಕ್ತ ಬಜೆಟ್‌ನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಅವರು ಮಾತನಾಢಿ, ಗೋವಿಂದಾಪುರದ ನೂತನ ಬಡಾವಣೆ ನಿವಾಸಿಗಳ ಅನುಕೂಲಕ್ಕಾಗಿ ಮುಂದಿನ ವಾರದಿಂದಲೇ ನಗರಸಾರಿಗೆ ಸಂಪರ್ಕ ಸೌಲಭ್ಯವನ್ನು ಕಲ್ಪಿಸಿಕೊಡಲು ಹಾಗೂ ಇಲ್ಲಿನ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನೂತನ ಶಾಲಾ ಕಟ್ಟಡವನ್ನು ನಿರ್ಮಿಸಿಕೊಡಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವಸತಿ ಬಡಾವಣೆಯಲ್ಲಿ ಉಳಿದ ಫಲಾನುಭವಿಗಳಿಗೂ ಮನೆಗಳನ್ನು ನಿರ್ಮಿಸಿಕೊಡಲು ಸಾಧ್ಯವಿರುವ ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ರಾಜ್ಯದ ಪ್ರತಿ ಕುಟುಂಬಗಳಿಗೂ ನೆಮ್ಮದಿಯ ಸೂರನ್ನು ಒದಗಿಸುವುದು ಸರ್ಕಾರದ ಜವಾಭ್ದಾರಿಯಾಗಿದ್ದು, ಅದನ್ನು ನಿರ್ವಹಿಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುವುದಾಗಿ ತಿಳಿಸಿದರು. ಮಾಜಿ ಮುಖ್ಯಮಂತ್ರಿಗಳಾಗಿದ್ದ ಪೂಜ್ಯ ದಿ.ಬಂಗಾರಪ್ಪನವರು ಕೂಡ ಬಡಜನರಿಗಾಗಿಯೇ ಆಶ್ರಯ ಯೋಜನೆಯನ್ನು ರೂಪಿಸಿ, ಲಕ್ಷಾಂತರ ಕುಟುಂಬಗಳಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿಕೊಟ್ಟಿರುವುದು, ಕೃಷಿಕರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ಸೌಲಭ್ಯ ಕಲ್ಪಿಸಿಕೊಟ್ಟಿದ್ದರ ಮುಂದುವರೆದ ಭಾಗವಾಗಿ ರಾಜ್ಯದ ಪ್ರತಿ ಮನೆಗೂ ಉಚಿತ ಬೆಳನ್ನು ಗೃಹಜ್ಯೋತಿ ಯೋಜನೆಯಡಿ ಒದಗಿಸಲಾಗುತ್ತಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ಒದಗಿಸಲು ಪ್ರತಿ ವರ್ಷ 22000ಕೋಟಿ. ಹಾಗೂ ಮನೆಗಳಿಗೆ ಉಚಿತ ವಿದ್ಯುತ್‌ಒದಗಿಸಲು ಸುಮಾರು 53000ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಅಲ್ಲದೇ ಈ ಗ್ಯಾರೆಂಟಿ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸುಮಾರು 53000ಕೋಟಿ ರೂ.ಗಳನ್ನು ವ್ಯಯ ಮಾಡಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್ಎನ್.ಚನ್ನಬಸಪ್ಪ ಅವರು ಮಾತನಾಡಿ, ಗೋವಿಂದಾಪುರ ಆಶ್ರಯ ಬಡಾವಣೆ ಮಾದರಿ ಬಡಾವಣೆಯಾಗಿ ರೂಪುಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಪ್ರಸ್ತುತ ಅಗತ್ಯವಿರುವ ಶಾಶ್ವತ ವಿದ್ಯುತ್‌ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಸರ್ಕಾರದಿಂದ ಅಗತ್ಯ ಅನುದಾನ ದೊರೆಯಬೇಕು ಎಂದರು.
• ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್‌ಯೋಜನೆಯಡಿ 5ಲಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 2.75ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಉಳಿದ 2.25ಲಕ್ಷ ಮನೆಗಳ ನಿರ್ಮಾಣ ಕಾರ್ಯಪ್ರಗತಿಯಲ್ಲಿದೆ. ರಾಜ್ಯದ ಪ್ರತಿ ವ್ಯಕ್ತಿಯ ಆರೋಗ್ಯ, ಶಿಕ್ಷಣ ಮತ್ತು ವಸತಿ ಸೌಲಭ್ಯ ಕಲ್ಪಿಸಿಕೊಟ್ಟಲ್ಲಿ ಜನಸಾಮಾನ್ಯರ ಜೀವನ ಮಟ್ಟ ಸುಧಾರಣೆಯಾಗಲಿದೆ. ಡಿ.ಎಸ್ ಅರುಣ್, ವಿದಾನ ಪರಿಷತ್‌ಸದಸ್ಯ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ಸದಸ್ಯೆ ಶ್ರೀಮತಿ ಬಲ್ಕಿಶ್‌ಬಾನು, ಡಾ|| ಧನಂಜಯ ಸರ್ಜಿ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಜಿ.ಪಲ್ಲವಿ, ರಾಜ್ಯ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾಧಿಕಾರಿ ಗುರುದತ್ತಹೆಗಡೆ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜೀವಗಾಂಧಿ ವಸತಿ ನಿಗಮದ ವ್ಯವಸ್ಥಾಪಕಿ ಶ್ರೀಮತಿ ಸುಶೀಲಮ್ಮ, ಮಹಾನಗರಪಾಲಿಕೆ ಆಯಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್‌ಸೇರಿದಂತೆ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
ಇದೇ ಕಾರ್ಯಕ್ರಮದಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆಗಳನ್ನು ಹಂಚಿಕೆ ಮಾಡಲಾಯಿತು.