Skate Game ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಶಿಪ್ ನ ೨೦೦ ಮೀ. ಮತ್ತು ೪೦೦ ಮೀ. ನಲ್ಲಿ ಶಿವಮೊಗ್ಗ ನಗರದ ಪ್ರತಿಷ್ಟಿತ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಅನೂಪ್ ಶೆಟ್ಟಿ ಎ.ಎಸ್. ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಮಧುರೈ ನಲ್ಲಿ ನಡೆದ ಸ್ಕೇಟಿಂಗ್ ಸ್ಪರ್ಧೆಯಲ್ಲೂ ಕೂಡ ೩ನೇ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಅನೂಪ್ ಮಲೇಷಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಪ್ರತಿಭಾನ್ವಿತನ ಸಾಧನೆಗೆ ಶಿವಮೊಗ್ಗ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕ ಡಾ. ಎಸ್.ಬಿ. ಜಗದೀಶ್ ಗೌಡ, ಛೇರ್ಮನ್ ರಮ್ಯ ಜಗದೀಶ್ ಗೌಡ, ತರಬೇತುದಾರ ದೀಪಕ್ ಸಿಂಗ್ ಹಾಗೂ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.