Saturday, December 6, 2025
Saturday, December 6, 2025

Department of Youth Empowerment and Sports ಏಪ್ರಿಲ್ 5 & 6 ರಂದು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ & ಸಾಂಸ್ಕೃತಿಕ ಸ್ಪರ್ಧೆಗಳು

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಏಪ್ರಿಲ್‌05 ಮತ್ತು 06 ರಂದು ನಗರದ ನೆಹರೂ ಕ್ರೀಡಾಂಗಣ ಮತ್ತು ನಗರದ ವಿವಿಧ ಸಮನಾಂತರ ವೇದಿಕೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಕ್ರೀಡಾಕೂಟಕ್ಕೆ ಜಿಲ್ಲೆಯ ಸುಮಾರು 4500ಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದ್ದು, ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯುವ 2ದಿನಗಳ ಕಾಲ ಆಹ್ವಾನಿತ ನೌಕರ ಕ್ರೀಡಾಪಟುಗಳಿಗೆ ವ್ಯವಸ್ಥಿತವಾಗಿ ಊಟೋಪಹಾರದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ ಅವರು ಕಾರ್ಯಕ್ರಮದ ಉದ್ಘಾಟನೆಗೆ ನಿಯಮಾನುಸಾರ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳನ್ನು ಆಹ್ವಾನಿಸಲಾಗುವುದ ಎಂದರು.
Department of Youth Empowerment and Sports ಕ್ರೀಡಾಕೂಟದಲ್ಲಿ ಎಲ್ಲಾ ಸ್ಪರ್ಧಾಳುಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಸ್ಪರ್ಧಿಸುವಂತೆ ಹಾಗೂ ವಿಜೇತರಾಗಿ ಸ್ಥಾನ ಪಡೆದ ಕ್ರೀಡಾಳುಗಳು ರಾಜ್ಯ ಮಟ್ಟದಲ್ಲಿ ನಡೆಯುವ ಸ್ಪರ್ಧೆಯಲ್ಲಿ ಜಿಲ್ಲೆಯ ಪ್ರತಿನಿಧಿಗಳಾಗಿ ಭಾಗವಹಿಸಿ, ಜಯಶಾಲಿಗಳಾಗಿ ಆಗಮಿಸುವಂತೆಯೂ ಅವರು ಆಶಿಸಿದ ಅವರು, ಕ್ರೀಡಾಕೂಟವು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಸೂಕ್ತವಾದ ತೀರ್ಪುಗಾರರನ್ನು ನಿಯೋಜಿಸುವಂತೆಯೂ ಅವರು ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈಗಾಗಲೇ ನಡೆಸಲಾದ ಕ್ರೀಡೆಗಳಲ್ಲಿ ವಿಜೇತರಾದ ಅಭ್ಯರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಈ ಅವಧಿಯಲ್ಲಿ ಕ್ರೀಡಾಳುಗಳಿಗೆ ಉತ್ತಮ ಉಟೋಪಚಾರ ಹಾಗೂ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಉತ್ತಮವಾದ ಸ್ಮರಣಿಕೆ ಮತ್ತು ಪ್ರಶಸ್ತಿಪ್ತತ್ರಗಳನ್ನು ಪ್ರದಾನ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್‌, ಕಾರ್ಯದರ್ಶಿ ಆರ್.ಪಾಪಣ್ಣ, ಸಿದ್ಧಬಸಪ್ಪ, ಡಾ|| ಸಿ.ಎ.ಹಿರೇಮಠ್‌, ದಿನೇಶ್‌, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...