World Wildlife Day ಮಾ.3 ರ ಬೆಳಗ್ಗೆ 10 ಗಂಟೆಗೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ‘ವೈಲ್ಡ್ಲೈಫ್ ಕನ್ಸರ್ವೇಷನ್ ಫೈನಾನ್ಸ್ : ಇನ್ವೆಸ್ಟಿಂಗ್ ಇನ್ ಪೀಪಲ್ & ಪ್ಲಾನೆಟ್’ ಎಂಬ ಶೀರ್ಷಿಕೆಯಡಿಯಲ್ಲಿ ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಇದೇ ದಿನದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ಸಹಭಾಗಿತ್ವದಲ್ಲಿ ‘ನಮ್ಮ ಕಾಡು ನಮ್ಮ ಕೆರೆ’ ಕಾರ್ಯಕ್ರಮದಡಿಯಲ್ಲಿ ಹುಲಿ-ಸಿಂಹಧಾಮದ ಆವರಣದೊಳಗಿರುವ 10 ಕೆರೆಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಇದರಿಂದ ಅರಣ್ಯ ಹಾಗೂ ಮೃಗಾಲಯದ ಪ್ರಾಣಿಗಳಿಗೆ ನೀರಿನ ಅನುಕೂಲಕರವಾಗಲಿದೆ. ಇದರ ಜೊತೆಗೆ Zoo Vista Project (3ಡಿ ವರ್ಚುವಲ್ ಝೂ) ದತ್ತು ಕಾರ್ಯಕ್ರಮವನ್ನು ಉತ್ತೇಜಿಸುವ ಯೋಜನೆಯ ಉದ್ಘಾಟನೆಯನ್ನೂ ಸಹ ಹಮ್ಮಿಕೊಳ್ಳಲಾಗಿದೆ ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.